ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ

2024 ರ ಫೆ.21 ರಂದು  ಬಿಸಿರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಇಂದು ಮೇ.28ರ ಭಾನುವಾರ ಅನುಜ್ಞಾ ಕಲಶದ ಬಳಿಕ ದೇವರ ಬಾಲಾಲಯ ಪ್ರತಿಷ್ಢೆ ಕಾರ್ಯ ನಡೆಯಿತು. ಬಳಿಕ ದೇವಾಲಯದ ಸಮಿತಿ, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರಪರ ಊರಿನ ಭಕ್ತರು ಶ್ರಮದಾನದ ಮ‌ೂಲಕ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಪ್ರಥಮ ಅಂಗವಾಗಿ ದೇವಸ್ಥಾನದ ಹಂಚು ತೆಗೆಯುವ ಕಾರ್ಯ ನಡೆಯಿತು.

ಜಾಹೀರಾತು

ಜೂನ್ 12ರಂದು ಜೀರ್ಣೋದ್ಧಾರ ಮತ್ತು ನವೀಕರಣಕ್ಕೆ ಶಂಕುಸ್ಥಾಪನೆ ನಡೆಯಲಿದೆ‌.ಅದೇ ದಿನ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಬ್ರಹ್ಮಕಲಶ ಸಮಿತಿಯನ್ನು ರಚಿಸುವ ಬಗ್ಗೆ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದ್ದು ಭಕ್ತರು ಆಗಮಿಸುವಂತೆ ವಿನಂತಿ ಮಾಡಿದ್ದಾರೆ. ದೇವಾಲಯದ ಜೀರ್ಣೋದ್ಧಾರದ ಅಂಗವಾಗಿ ದೈನಂದಿನ ಪೂಜಾ ಕೈಕಂರ್ಯಗಳಲ್ಲಿ ಬದಲಾವಣೆಯಾಗಿದೆ ಎಂದು ಸಮಿತಿ ತಿಳಿಸಿದ್ದು, ಬೆಳಿಗ್ಗೆ 8 ಗಂಟೆಗೆ ಮತ್ತು ರಾತ್ರಿ 7.30 ಕ್ಕೆ  ದಿನಕ್ಕೆ  ಎರಡು ಬಾರಿ ಮಾತ್ರ ಪೂಜೆ ನಡೆಯಲಿದೆ ಭಕ್ತರು ಸಹಕರಿಸುವಂತೆ ವಿನಂತಿ ಮಾಡಿದ್ದಾರೆ.

 ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಗೌರವಾಧ್ಯಕ್ಷ ಜಗನ್ನಾಥ ಚೌಟ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷ ಆನಂದ, ಪ್ರಧಾನ ಆರ್ಚಕ ಮಾದಕಟ್ಟೆ ಈಶ್ವರ ಭಟ್, ಪ್ರಮುಖರಾದ ಸದಾಶಿವ ಬಂಗೇರ, ಉಮೇಶ್ ಕುಮಾರ್, ನರೇಂದ್ರನಾಥ್ ಭಂಡಾರಿ, ಜಯ ಕೆ, ಪುಷ್ಪರಾಜ ಶೆಟ್ಟಿ ,ಕೇಪು ಗೌಡ, ಪದ್ಮನಾಭ ಗೌಡ, ಬಾಲಕೃಷ್ಣ ಗೌಡ, ಪದಾಧಿಕಾರಿಗಳು ಮತ್ತು ವಿವಿಧ ಸಂಘಟನೆಯ ಹಾಗೂ‌ ಊರ ಪರವೂರ ಭಕ್ತರು ಪಾಲ್ಗೊಂಡಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*