ಮೊಡಂಕಾಪು: ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಪಿಯುಸಿ ಪ್ರಾರಂಭೋತ್ಸವ

ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವು ಕಾರ್ಮೆಲ್ ಹಾಲ್ ನಲ್ಲಿ ಜರುಗಿತು. ಪ್ರಾಂಶುಪಾಲರಾದ ವಂದನೀಯ ಭಗಿನಿ ನವೀನ ಎ.ಸಿ., ಉಪ ಪ್ರಾಂಶುಪಾಲೆ ವಂದನೀಯ ಭಗಿನಿ ಫ್ರೆಲ್ಸಿಟ್ಟ ಎ.ಸಿ, ಉಪನ್ಯಾಸಕ  ಸುರೇಶ್ ನಂದೊಟ್ಟು ಹೆತ್ತವರ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ,ಹೆತ್ತವರು, ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಖಂಡಿತ ಸಾಧ್ಯ ಎಂದು ಪ್ರಾಂಶುಪಾಲರು ಅಭಿಪ್ರಾಯ ಪಟ್ಟರು. ಕಾಲೇಜಿನ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಭಗಿನಿ ಫೆಲ್ಶಿಟ್ಟ ಎ.ಸಿ ಹಾಗೂ ಉಪನ್ಯಾಸಕಿ ಪ್ರೀತಿ ಮಾಡ್ತಾ ತಿಳಿಸಿದರು. ಉಪನ್ಯಾಸಕ ಸಂತೋಷ್ ಡಿಸೋಜ ಸ್ವಾಗತಿಸಿ ಸೌಜನ್ಯ ವಂದಿಸಿದರು. ಸುರೇಶ್ ನಂದೊಟ್ಟು ನಿರೂಪಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೊಡಂಕಾಪು: ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಪಿಯುಸಿ ಪ್ರಾರಂಭೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*