ಬಂಟ್ವಾಳ

ವಿದ್ಯುತ್ ದರ ಏರಿಕೆ: ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ

ವಿದ್ಯುತ್ ದರವನ್ನು ರಾಜ್ಯ ಸರಕಾರ ಹೆಚ್ಚಿಸಿದ್ದನ್ನು ಖಂಡಿಸಿ ಬಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಪ್ರತಿಭಟನೆ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬಂದಿದ್ದು, ಇದು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ. ಇನ್ನು ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷವನ್ನೂ ಗ್ಯಾರಂಟಿ ದಿವಾಳಿ ಮಾಡುವುದರೊಂದಿಗೆ ರಾಜ್ಯವನ್ನು ಪಾಕಿಸ್ತಾನ್, ವೆಜೆಜುವೆಲಾ ಮಾದರಿ ಆರ್ಥಿಕ ದಿವಾಳಿತನಕ್ಕೆ ಕೊಂಡೊಯ್ಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿಗಳು ಅನುಷ್ಠಾನಕ್ಕೇ ಯೋಗ್ಯವಾದುದಲ್ಲ, ವಿದ್ಯುತ್ ಉಚಿತ ಎಂದು ಒಂದೆಡೆ ಹೇಳಿ, ಮತ್ತೊಂದೆಡೆಯಿಂದ ದರ ಏರಿಕೆ ಮಾಡುತ್ತಿದೆ. ನಿರುದ್ಯೋಗಿಗಳ ಭತ್ತೆಗೆ ಈಗ ಕಂಡೀಶನ್ ಹಾಕಲಾಗುತ್ತಿದೆ, ಸರಕಾರ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದು, ಅಂದು ಹೇಳಿದ ಮಾತಿಗೆ ವ್ಯತಿರಿಕ್ತವಾಗಿ ಇಂದು ಷರತ್ತುಗಳನ್ನು ಹಾಕಲಾಗುತ್ತಿದೆ. ತಾನು ನೀಡಿದ ಆಶ್ವಾಸನೆಯನ್ನು ಮರೆಮಾಚುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಮಾಧವ ಮಾವೆ, ಸುಲೋಚನಾ ಜಿ.ಕೆ.ಭಟ್, ಕಮಲಾಕ್ಷಿ ಪೂಜಾರಿ, ರಮನಾಥ ರಾಯಿ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಸುರೇಶ್ ಕೋಟ್ಯಾನ್, ಗಣೇಶ್ ರೈ ಮಾಣಿ, ನಂದರಾಮ ರೈ, ಜಯರಾಮ ನಾಯ್ಕ್ ಕುಂಟ್ರಕಳ, ಪ್ರಕಾಶ್ ಅಂಚನ್, ಕೇಶವ ದೈಪಲ್, ಯಶೋಧರ ಕರ್ಬೆಟ್ಟು, ಧನಂಜಯ ಶೆಟ್ಟಿ ಸರಪಾಡಿ, ಪ್ರಭಾಕರ ಪ್ರಭು, ರಾಜಾರಾಮ ನಾಯಕ್, ದಿನೇಶ್ ದಂಬೆದಾರ್, ಹರಿಪ್ರಸಾದ್ ಸಹಿತ ಬಿಜೆಪಿಯ ಪ್ರಮುಖ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ