ನಮ್ಮೂರು

ತಂಪೆರೆದ ಮೊದಲ ಮಳೆ: ಬಿ.ಸಿ.ರೋಡಿನಲ್ಲಿ ರಸ್ತೆಯಲ್ಲೇ ಸಮೃದ್ಧ ನೀರು!!

ಬಿ.ಸಿ.ರೋಡ್ ನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಮುಂಭಾಗ ನಿರ್ಮಾಣಗೊಂಡಿರುವ ರಸ್ತೆಯ ಒಂದು ಪಾರ್ಶ್ವದಲ್ಲಿ ಮಳೆಯಿಂದಾಗಿ ಸರಿಯಾಗಿ ನೀರು ಹರಿದು ಹೋಗದೆ ಹೊಳೆಯಂತಾಗಿತ್ತು. — BANTWALNEWS PHOTO

ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಮಳೆಯಾಗಿರುವಂತೆಯೇ ಬಂಟ್ವಾಳ ತಾಲೂಕಿನಲ್ಲಿಯೂ ಶನಿವಾರ ಮಳೆಯಾಗಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಮಳೆ ಧಾರಾಕಾರವಾಗಿ ಸುರಿಯಿತು. ಇದರಿಂದಾಗಿ ಬಿಸಿಲ ಬೇಗೆಗೆ ಬಸವಳಿದಿದ್ದ ಜನತೆಗೆ ಮಳೆ ತಂಪೆರೆದಂತಾಗಿದೆ. ವಾಡಿಕೆಯ ಮುಂಗಾರು ಕೇರಳ ಪ್ರವೇಶವಾಗಿದ್ದು, ಅದರೊಂದಿಗೆ ಚಂಡಮಾರುತದ ಪ್ರಭಾವವೂ ಇರುವ ಕಾರಣ ಈಗ ಮಳೆಯಾಗುತ್ತಿದ್ದು, ಕಚೇರಿ, ಶಾಲೆ, ಕಾಲೇಜುಗಳಿಗೆ ತೆರಳುವವರು ಮೊದಲೇ ಸಿದ್ಧರಾಗಿದ್ದರು. ಬಸ್ ನಿಲ್ದಾಣ ಸಹಿತ ಹಲವೆಡೆ ಹೂಳೆತ್ತದ ಕಾರಣ ರಸ್ತೆಯಲ್ಲೇ ನೀರು ನಿಂತ ದೃಶ್ಯಗಳು ಕಂಡುಬಂದವು. ಇನ್ನು ಬಿ.ಸಿ.ರೋಡ್ ನಲ್ಲಿ ಮಂಗಳೂರಿಗೆ ತೆರಳುವ ಪ್ರಯಾಣಿಕರು ಎಂದಿನಂತೆಯೇ ನೀರಿನ ಮಧ್ಯೆ ನಿಂತರೆ, ದಶಕಗಳಿಂದ ಮಳೆಗಾಲದಲ್ಲಿ ನೀರು ನಿಲ್ಲುವ ಜಾಗವಾಗಿ ಪ್ರಸಿದ್ಧಿ ಪಡೆದಿದ್ದ ಬಿ.ಸಿ.ರೋಡಿನ ಭೂ ಅಭಿವೃದ್ಧಿ ಬ್ಯಾಂಕ್ ಕಟ್ಟಡದ ಮುಂಭಾಗದ ರಸ್ತೆ ಕಾಂಕ್ರೀಟ್ ಆಗಿ ಬದಲಾದರೂ ನೀರು ಹರಿದುಹೋಗಲು ದಾರಿ ಇಲ್ಲದೆ ರಸ್ತೆಯಲ್ಲೇ ನೀರು ನಿಂತಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts