ಆಗಸ್ಟ್ 8ರಂದು ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಜರಗುವ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ 2023ರ ಅಂಗವಾಗಿ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಶ್ರೀ ಸಂಸ್ಥಾನದ ಯೋಗಿನಿ ಸಾಧ್ವಿ ಶ್ರೀ ಮಾತಾನಂದಮಯೀ ಅವರು ಗೌರವ ಮಾರ್ಗದರ್ಶಕರಾಗಿರುವ ಸಮಿತಿಗೆ ಮುಂಬೈನ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರುಕನ್ಯಾನ ಗೌರವಾಧ್ಯಕ್ಷರಾಗಿ, ಬರೋಡಾದ ಉದ್ಯಮಿ ಶಶಿಧರ ಬಿ.ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕೆ. ಪದ್ಮನಾಭ ಕೊಟ್ಟಾರಿ ಮತ್ತು ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು ಕಾರ್ಯಾಧ್ಯಕ್ಷರಾಗಿ ಮಹಾರಾಷ್ಟ್ರ ಸಮಿತಿಯ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿ ವಾಮಯ್ಯ ಬಿ.ಶೆಟ್ಟಿ ಹಾಗೂ ಪ್ರಮುಖ ಗುರುಬಂಧುಗಳು, ಶ್ರೀಸಂಸ್ಥಾನದ ಸಹಸಂಸ್ಥೆಗಳ ಮುಖ್ಯಸ್ಥರನ್ನೊಳಗೊಂಡ ಜನ್ಮದಿನೋತ್ಸವ ಸಮಿತಿಯನ್ನು ರಚಿಸಲಾಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…