ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ

ಜಾಹೀರಾತು

ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಅಳವಡಿಸಲಾಗಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳ ಉಪನೋಂದಾವಣಿ ಕಚೇರಿಗಳಲ್ಲಿ ಈ ತಂತ್ರಾಂಶ ಬಳಕೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಅನುಷ್ಠಾನವಾಗುತ್ತಿದೆ.  ಜಿಲ್ಲೆಯ 9 ಉಪನೋಂದಣಾಧಿಕಾರಿ ಕಚೇರಿಗಳ ಪೈಕಿ ಪ್ರಥಮವಾಗಿ ಬಂಟ್ವಾಳ ಉಪನೋಂದಾವಣಿ ಕಚೇರಿಯಲ್ಲಿ ಕಾವೇರಿ 2.0 ಅಳವಡಿಕೆಯಾಗಿದೆ. ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಅಳವಡಿಕೆಯಾಗಿದ್ದು, ಇದನ್ನು ದಕ್ಷಿಣ ಕನ್ನಡ ಜಿಲ್ಲಾ ನೋಂದಣಾಧಿಕಾರಿ ಸೈಯದ್ ನೂರ್ ಪಾಷಾ ಎಸ್. ಅವರು ಚಾಲನೆ ನೀಡಿದರು. ಗುರುವಾರ ಬೆಳಗ್ಗೆ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಥಮ ನೋಂದಣಿಯನ್ನು ಆಶಿಕ್ ಕುಕ್ಕಾಜೆ ಅವರು ಶೌಕತ್ ಅಲಿ ಅವರಿಗೆ ದಸ್ತಾವೇಜು ನೋಂದಾಯಿಸುವ ಮೂಲಕ ಮಾಡಲಾಯಿತು. ಈ ಸಂದರ್ಭ ಸಿಎಂಎಸ್ ನ ಮೈಸೂರು ವಿಭಾಗದ ಅಸಿಸ್ಟೆಂಟ್ ಮೆನೇಜರ್ ನರೇಂದ್ರ ನಾಯಕ್ ಬಂಟ್ವಾಳ ಉಪನೋಂದಣಾಧಿಕಾರಿ ಕವಿತಾ ಎ.ಸಿ. ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*