ಬಂಟ್ವಾಳ ತಾಲೂಕಿನಲ್ಲಿ ಭಾರೀ ಮಳೆ: ಅಪಾಯದಲ್ಲಿ ಶಾಲೆ, ಹಲವು ಮನೆಗಳಿಗೆ ಹಾನಿ

ಬಂಟ್ವಾಳ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಶಾಲೆಯೊಂದು ಅಪಾಯದ ಸ್ಥಿತಿಯಲ್ಲಿದೆ. ಅದೇ ರೀತಿ ಹಲವು ಮನೆಗಳಿಗೂ ಹಾನಿಗಳು ಸಂಭವಿಸಿವೆ. ಗಡಿಯಾರ ಎಂಬಲ್ಲಿ ಶಾಲೆ ಅಪಾಯದ ಸ್ಥಿತಿಯಲ್ಲಿರುವ ಕಾರಣ, ಮಕ್ಕಳನ್ನು ಮನೆಗೆ ಕಳುಹಿಸಲಾಯಿತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನೂ ನಡೆಸಿದರು.

ಜಾಹೀರಾತು

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ಯೆ ಬರುವ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸರಕಾರಿ ಶಾಲೆ ಮತ್ತು ವಿದ್ಯುತ್ ಟವರ್ ಕೆಲ ದಿನಗಳಿಂದ ಸುರಿಯುವ ಮಳೆಗೆ ಗುಡ್ಡ ಜರಿದು ಬೀಳುವ ಹಂತದಲ್ಲಿತ್ತು. ಶಾಲೆಯ ಕಟ್ಟಡ ಅಪಾಯದಲ್ಲಿದ್ದ ಕಾರಣ ಕೂಡಲೇ ಶಾಲೆಗೆ ರಜೆ ನೀಡಲಾಗಿತ್ತು.

ಪೆರಾಜೆ ಗ್ರಾಮದ ಮಂಜೊಟ್ಟಿ ಎಂಬಲ್ಲಿ ಶರತ್ ಅವರ ವಾಸ್ತವ್ಯದ ಮನೆಯ ತಡೆಗೋಡೆ ಕುಸಿದುಬಿದ್ದಿದೆ . ವಾಹನ ನಿಲ್ಲಿಸಲು ಮಾಡಿದ  ಶೀಟಿನ ಶೆಡ್ ಬಿದ್ದಿರುತ್ತವೆ. ಮಾಣಿ ಗ್ರಾಮದ ಮಾಣಿ ಕೋಡಿ ಎಂಬಲ್ಲಿ ಎಂ. ಜಿ.ಬಾಬು ನಲ್ಕೆ ಅವರ ವಾಸ್ತವ್ಯದ  ಹಳೆಯ ಮನೆಗೆ ತೀವ್ರ ಹಾನಿಯಾಗಿದೆ. ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ಗಂಗಾಧರ ಎಂಬುವವರ ಮನೆಯಿಂದ ಪ್ರತ್ಯೇಕ ಇರುವ ಕೊಟ್ಟಿಗೆಗೆ ನಿನ್ನೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಹಾನಿಯಾಗಿರುತ್ತದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ತಾಲೂಕಿನಲ್ಲಿ ಭಾರೀ ಮಳೆ: ಅಪಾಯದಲ್ಲಿ ಶಾಲೆ, ಹಲವು ಮನೆಗಳಿಗೆ ಹಾನಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*