ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶೈಲಜಾ ರಾಜೇಶ್ ಆಯ್ಕೆಯಾಗಿದ್ದಾರೆ.
ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಕರ್ನಾಟಕ ಸರಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾಗಿರುವ ಅವರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಯ ಸಂಸ್ಥಾಪಕರಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಗಿಣಿ, ಕಾರ್ಯದರ್ಶಿಯಾಗಿ ರಶ್ಮಿ ಸತೀಶ್, ಜತೆ ಕಾರ್ಯದರ್ಶಿಯಾಗಿ ಸರೋಜಿನಿ, ಖಜಾಂಚಿಯಾಗಿ ಸುಜಾತಾ ದಿನೇಶ್ ಇವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಬಿಲ್ಲವ ಮಹಿಳಾ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ರೇವತಿ ಬಡಗಬೆಲ್ಲೂರು ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮಾಜಿ ಅಧ್ಯಕ್ಷರಾದ ನಯನ, ಮಾಲತಿ, ಭಾರತಿ ಕುಂದರ್, ಜಯಲಕ್ಷ್ಮಿ ಉಪಸ್ಥಿತರಿದ್ದರು, ಬಿಲ್ಲವ ಸಂಘದ ಕಾರ್ಯದರ್ಶಿ,ಪದಾಧಿಕಾರಿಗಳು ಉಪಸ್ಥಿತರಿದ್ದರು…ಕಾರ್ಯದರ್ಶಿ ಲಲಿತಾ ವಂದಿಸಿದರು. ಭವಾನಿ ಸ್ವಾಗತಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…