ರೆಡ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 5ರಂದು ರಜೆಯನ್ನು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳಿವು:

ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 – 2 4 4 2 5 9 0‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರೆಡ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*