ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆಯಲ್ಲಿ ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಚಾಲನೆ ಮಾಡುತ್ತಿರುವವರ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದ್ದು, ಇದರಲ್ಲಿ ಕಾರಿನಲ್ಲಿದ್ದ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರಿ ಖತೀಜಾ ಹನಾ (20) ಸಾವನ್ನಪ್ಪಿದವರು. ಅವರೊಂದಿಗೆ ಅವರ ತಾಯಿ ಮತ್ತು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಖತೀಜ ಹನಾ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯರನ್ನು ಭೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ ಹೋಗುವ ವೇಳೆ ಘಟನೆ ನಡೆದಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆ ಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಹೊರೆಕ್ಕೆಸೆಯಲ್ಟಿಟ್ಟಿದ್ದಾರೆ ಗಂಭೀರ ಗಾಯಗೊಂಡ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಯಾವುದೇ ಪ್ರಯೋಜನವಾಗಿಲ್ಲ. ಅದಾಗಲೇ ಆಕೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಇವರು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದಾರೆ.