ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು, ಇಬ್ಬರು ಸಿಲುಕಿಕೊಂಡಿದ್ದಾರೆ. ಅವರಲ್ಲಿ ಒಬ್ಬರನ್ನು ರಕ್ಷಣೆ ಮಾಡಲಾಗಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡವರು. ಅವರಲ್ಲಿ ಸಫಾ ಅವರನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತಹಶಿಲ್ದಾರ್ ಎಸ್.ಬಿ.ಕೂಡಲಗಿ ಮತ್ತು ಕಂದಾಯ ಇಲಾಖೆ ಸಿಬಂದಿ ಉಪಸ್ಥಿತರಿದ್ದಾರೆ. ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.
ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪುಮನೆ ಎಂಬಲ್ಲಿ ವಾಸ್ತವಿರುವ ಮಹಮ್ಮದ್ ಎಂಬುವರ ಮನೆಗೆ ಗುಡ್ಡ ಜರಿದು ಮನೆಯಲ್ಲಿ ವಾಸ್ತವ್ಯವಿದ್ದ ಮಹಮ್ಮದ್ ರವರ ಪತ್ನಿ 49 ವರ್ಷ ಪ್ರಾಯದ ಝರಿನ ಹಾಗೂ ಮಗಳಾದ 20 ವರ್ಷ ಪ್ರಾಯದ ಶಫಾ ಎಂಬುವರು ಮನೆಯೊಳಗೆ ಸಿಕ್ಕಿಕೊಂಡಿದ್ದು ಅದರಲ್ಲಿ ಸಫಾರವರನ್ನು ಕೂಡಲೇ ರಕ್ಷಣೆ ಮಾಡಲಾಗಿರುತ್ತದೆ ಝರೀನಾ ರವರ ರಕ್ಷಣಾ ಕಾರ್ಯವು ನಡೆಯುತ್ತಿದ್ದು ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತಹಶಿಲ್ದಾರ್ ಎಸ್.ಬಿ.ಕೂಡಲಗಿ ಮತ್ತು ಕಂದಾಯ ಇಲಾಖೆ ಆರ್.ಐ. ಜನಾರ್ದನ ಮತ್ತು ಸಿಬಂದಿ ಉಪಸ್ಥಿತರಿದ್ದಾರೆ. ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.
Be the first to comment on "ನಂದಾವರದಲ್ಲಿ ಗುಡ್ಡ ಜರಿತಕ್ಕೆ ಸಿಲುಕಿಕೊಂಡ ಮನೆಯವರು: ರಕ್ಷಣಾ ಕಾರ್ಯ ಪ್ರಗತಿಯಲ್ಲಿ"