ಬಂಟ್ವಾಳ: ಪುಂಜಾಲಕಟ್ಟೆಯಿಂದ ಬಂಟ್ವಾಳಕ್ಕೆ ಬರುವ ಹೆದ್ದಾರಿ ಮಾರ್ಗದ ಪರ್ಲ ಚರ್ಚ್ ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದ ಘಟನೆಯೊಂದರಲ್ಲಿ ಚರ್ಚ್ ಗೆ ಪೂಜೆಗೆಂದು ಬರುವ ಮಾರುತಿ ಓಮ್ನಿಯಲ್ಲಿ ಆಗಮಿಸುತ್ತಿರುವವರ ವಾಹನಕ್ಕೆ ಹಿಂದಿನಿಂದ ಮಾರುತಿ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ವಾಹನಗಳಲ್ಲಿದ್ದ ಪ್ರಯಾಣಿಕರು ತೀವ್ರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಓಮ್ನಿ ಚಾಲಕ ರಾಯ್ಸನ್, ಅವರ ಜೊತೆಯಲ್ಲಿದ್ದ ಮಕ್ಕಳು ಸಹಿತ ಮೂವರು ಮತ್ತು ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯಗಳಾಗಿವೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡು ಬೆಳ್ತಂಗಡಿ ದಾರಿಯ ಪರ್ಲ ಚರ್ಚ್ ಸಮೀಪ ಈ ಅವಘಡ ಸಂಭವಿಸಿದೆ. ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಹಿಂಬದಿಯಿಂದ ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಒಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಬೇಟಿ ನೀಡಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…