ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಮತ್ತು ಭೂಕುಸಿತ ಕಾರಣದಿಂದ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಅಲ್ಲಲ್ಲಿ ಸಿಲುಕಿಕೊಂಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯ 20 ಯಾತ್ರಾರ್ಥಿಗಳು ಸೇಫ್ ಆಗಿದ್ದೇವೆ ಎಂದು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಮಾರುತಿನಗರ ತಿಳಿಸಿದ್ದಾರೆ. ನಾವೀಗ ಸುರಕ್ಷಿತವಾಗಿದ್ದೇವೆ. ಸದ್ಯಕ್ಕೆ ಎಲ್ಲೂ ಹೋಗಲು ಆಗುತ್ತಿಲ್ಲ. ಆದರೆ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಸೇನೆಯವರು ಕ್ರಮ ಕೈಗೊಳ್ಳುತ್ತಿದ್ದಾರೆ. ಅತಿಯಾದ ಮಳೆಗೆ ಭೂಕುಸಿತ ಕಂಡು ಬಂದಿದ್ದು ಯಾತ್ರಾರ್ಥಿಗಳು ಜಾಗರೂಕತೆಯಿಂದ ಇರುವಂತೆ ತಿಳಿಸಿದ್ದಾರೆ ಸದ್ಯ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ’’ ಎಂದವರು ತಿಳಿಸಿದರು. ದ.ಕ.ಜಿಲ್ಲೆ ಹಾಗೂ ಉಡುಪಿಯಿಂದ 20 ಮಂದಿ ಇದ್ದೇವೆ ಎಂದು ಹೇಳಿರುವ ಸಂತೋಷ್, ನರಿಕೊಂಬಿನ ಐವರು ಸೇರಿ, ಪುತ್ಥೂರು, ಉಡುಪಿ, ಮೂಡುಬಿದಿರೆ, ಸಜಿಪ, ಉಪ್ಪಿನಂಗಡಿಗಳಿಂದ ಬಂದವರೂ ಇದ್ದಾರೆ ಎಂದರು. ಕಳೆದ ವರ್ಷವೂ ಸಂತೋಷ್ ತೆರಳಿದ್ದ ಸಂದರ್ಭ ಸಮಸ್ಯೆ ಉಂಟಾಗಿತ್ತು. ಬಳಿಕ ಸುರಕ್ಷಿತವಾಗಿ ಅವರು ಮರಳಿದ್ದನ್ನು ನೆನಪಿಸಿದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…