ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿ ತೋಡು ದಾಟುವ ಸಂದರ್ಭ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಸ್ಥಳೀಯ ನಿವಾಸಿ ಕೇಶವ ನಾಯ್ಕ (51) ಸಾವನ್ನಪ್ಪಿದವರು. ಈ ಕುರಿತು ಅವರ ಸಹೋದರ ರಾಮಣ್ಣ ನಾಯ್ಕ ದೂರು ನೀಡಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗಿನ ಅವಧಿಯಲ್ಲಿ ಘಟನೆ ನಡೆದಿರಬಹುದು. ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಮನೆಯ ಬಳಿಯಿರುವ ನೀರು ಹರಿಯುವ ಸಾರ್ವಜನಿಕ ಕಣಿಗೆ ಹಾಕಿರುವ ಪಾಪನ್ನು ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕವುಚಿ ಬಿದ್ದು ಮೇಲೆ ಏಳಲು ಆಗದೇ ಮೃತಪಟ್ಟಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…