ಬಂಟ್ವಾಳ

ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ: ಜುಲೈ 12ರಂದು ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 12ರಂದು ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ನಿಯೋಜಿತ ಅಧ್ಯಕ್ಷ ಗಣೇಶ್ ಶೆಟ್ಟಿ ಗೋಳ್ತಮಜಲು ತಿಳಿಸಿದ್ದಾರೆ.

ಜಾಹೀರಾತು

ಈ ಬಾರಿ ಮಧುಸೂಧನ ಶೆಣೈ ಕಾರ್ಯದರ್ಶಿಯಾಗಿ, ಜ್ಯೋತೀಂದ್ರ ಶೆಟ್ಟಿ ಕೋಶಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಪದಗ್ರಹಣ ಕಾರ್ಯವನ್ನು ಪೂರ್ವ ಜಿಲ್ಲಾ ಗವರ್ನರ್ ಎಂ.ರಂಗನಾಥ ಭಟ್ ನೆರವೇರಿಸುವರು. ಅತಿಥಿಗಳಾಗಿ ಸಹಾಯಕ ಗವರ್ನರ್ ಲಾರೆನ್ಸ್ ಗೋನ್ಸಾಲ್ವಿಸ್, ಜೋನಲ್ ಲೆಫ್ಟಿನೆಂಟ್ ರವೀಂದ್ರ ದರ್ಬೆ, ಜಿಎಸ್ ಆರ್ ಪದ್ಮನಾಭ ರೈ ಭಾಗವಹಿಸುವರು ಎಂದವರು ತಿಳಿಸಿದ್ದು, ಅಂಗನವಾಡಿ, ಶಾಲೆಗಳಿಗೆ ನೆರವು ಸಹಿತ ವಿವಿಧ ಸೇವಾಕಾರ್ಯಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು ಎಂದು ಹೇಳಿದರು. ಜಿಎಸ್ ಆರ್ ಪದ್ಮನಾಭ ರೈ ಅವರು ಕ್ಲಬ್ ಕೈಗೊಂಡ ಚಟುವಟಿಕೆಗಳನ್ನು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ನಿರ್ಗಮನ ಅಧ್ಯಕ್ಷೆ ಪಲ್ಲವಿ ಕಾರಂತ, ಸ್ಥಾಪಕಾಧ್ಯಕ್ಷ ಸತೀಶ್ ಕುಮಾರ್ ಕೆ, ನಿಯೋಜಿತ ಕಾರ್ಯದರ್ಶಿ ಮಧುಸೂಧನ ಶೆಣೈ, ಮುಂದಿನ ಸಾಲಿನ ಅಧ್ಯಕ್ಷ ಶೇಷಪ್ಪ ಮೂಲ್ಯ, ಜ್ಯೋತೀಂದ್ರ ಶೆಟ್ಟಿ, ಪ್ರಶಾಂತ್ ಕಾರಂತ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts