ಬಂಟ್ವಾಳ: ಅಧಿವಕ್ತಾ ಪರಿಷತ್ ನ ಬಂಟ್ವಾಳ ತಾಲೂಕು ಘಟಕ, ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬಂಟ್ವಾಳ ಘಟಕ ಆಶ್ರಯದಲ್ಲಿ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾಹಿತಿ- ಸಂವಾದ ಕಾರ್ಯಕ್ರಮ ಆಯೋಜಿಸಲಾಯಿತು. ವಕೀಲರ ಸಂಘ (ರಿ), ಬಂಟ್ವಾಳ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಾಹೀರಾತು
ಮಂಗಳೂರಿನ ಹಿರಿಯ ವಕೀಲರಾದ ಪರಮೇಶ್ವರ ಜೋಯಿಸ ಏಕ ರೂಪ ನಾಗರಿಕ ಸಂಹಿತೆ ಬಗ್ಗೆ ಮಾಹಿತಿ ಮತ್ತು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಅಧಿವಕ್ತಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಪುಷ್ಪಲತಾ ಯು. ಕೆ ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾದ ಉಮಾ ಎನ್ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಶ್ರೀರಾಮ ಪ್ರಭು ಧನ್ಯವಾದ ಸಮರ್ಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಏಕರೂಪ ನಾಗರಿಕ ಸಂಹಿತೆ: ಬಂಟ್ವಾಳದಲ್ಲಿ ಮಾಹಿತಿ ಕಾರ್ಯಕ್ರಮ"
Be the first to comment on "ಏಕರೂಪ ನಾಗರಿಕ ಸಂಹಿತೆ: ಬಂಟ್ವಾಳದಲ್ಲಿ ಮಾಹಿತಿ ಕಾರ್ಯಕ್ರಮ"