ಇಂದು ಬೆಳಗಿನ ಜಾವ ನಡೆದ ದುರ್ಘಟನೆಯೊಂದರಲ್ಲಿ ವಿಟ್ಲ ಸಮೀಪ ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.

ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆ ನಡೆದಿದೆ. ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮನೆ ಮೇಲೆ ಉರುಳಿದ ಪಿಕಪ್: ಸಿಲುಕಿಕೊಂಡ ಮಹಿಳೆ"