ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿ ನಡೆದ ದಾರುಣ ಘಟನೆಯಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು 20 ತಿಂಗಳ ಮಗುವೊಂದು ಮೃತಪಟ್ಟಿದೆ. ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು ಕಿತಾಬುನ್ ದಂಪತಿಯ ಪುತ್ರಿ ಆಯಿಶಾ ಮೃತಪಟ್ಟಿದೆ. ಬುಧವಾರ ಸಂಜೆ ಮನೆಯಲ್ಲಿ ಅರ್ಧ ನೀರು ತುಂಬಿಸಿಟ್ಟಿದ್ದ ಬಕೆಟ್ ಬಳಿ ಮಗು ಆಟವಾಡುತ್ತಿತ್ತು. ಈ ವೇಳೆ ಮಗು ಬಕೆಟ್ ಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…