ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದೀಚೆಗೆ ಮತ್ತೆ ಭಾರಿ ಮಳೆಯಾಗಿದ್ದು, ಘಟ್ಟ ಪ್ರದೇಶದಲ್ಲೂ ಮಳೆಯಾದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಹೆಚ್ಚಳ ಕಂಡಿದೆ.
ಜಾಹೀರಾತು
ನೇತ್ರಾವತಿ ನದಿಯಲ್ಲಿ ಕಳೆದ ಕೆಲ ದಿನಗಳಿಂದ 3ರಿಂದ 4 ಮೀಟರ್ ಎತ್ತರವಿದ್ದ ನೀರಿನ ಮಟ್ಟ ಶನಿವಾರ ಬೆಳಗ್ಗೆ 5.5 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ಅಪಾಯದ ಮಟ್ಟ 8.5 ಮೀಟರ್ ಆಗಿದೆ.
ಇನ್ನು, ಮಳೆಯಿಂದ ಹಾನಿಗಳು ಮುಂದುವರಿದಿದ್ದು, ನೆಟ್ಲ ಮುಡ್ನೂರು ಗ್ರಾಮದ ಏಮಾಜೆ ಎಂಬಲ್ಲಿ ಹೊನ್ನಮ್ಮ ವಾಸ್ತವ್ಯದ ಮನೆಯಿಂದ ಪ್ರತ್ಯೇಕವಾಗಿ ಇರುವ ಕೊಟ್ಟಿಗೆ ಹಾನಿಯಾಗಿರುತ್ತದೆ. ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ- ನೇರಳಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆಯಿತು. ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯ ನಡೆಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಭಾರಿ ಮಳೆ: ರಸ್ತೆಗೆ ಉರುಳಿದ ಮರ, ನೀರಿನ ಮಟ್ಟ ಹೆಚ್ಚಳ"