ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜು, ಪದವಿ ಶಿಕ್ಷಣ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 25ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ( ಜುಲೈ 25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.24 ರಿಂದ 25 ರವರೆಗೆ ರೆಡ್ ಅಲರ್ಟ್ ಯೋಜನೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ನಿರ್ಣಯ ತೆಗೆದುಕೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ( ಜುಲೈ 25) ರಂದು ರಜೆಯನ್ನು ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು, ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ.ಸಂಬಂದಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ನನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು. ಯಾವುದೇ ಸಮಸ್ಯೆಗಳಿಗೆ 1077 / 0824-2412591 ದೂರವಾಣಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.