ಬಂಟ್ವಾಳ

ಬಂಟ್ವಾಳ ಕನ್ನಡ ಭವನದಲ್ಲಿ ಕೃತಿಗಳ ಲೋಕಾರ್ಪಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ರಾಜಗೋಪಾಲ ಕನ್ಯಾನ ಅವರ ಸಂಪಾದಿತ ಅನುವಾದಿತ ಕೃತಿ ಮಲಯಾಳೀ ವಿಷವೈದ್ಯ ಹಾಗೂ ಕೆ.ಟಿ. ರೈ ವಿಟ್ಲ ಮತ್ತು ರಾಜಗೋಪಾಲ ಕನ್ಯಾನ ಜಂಟಿಯಾಗಿ ಸಂಪಾದಿಸಿದ ಕೆದಂಬಾಡಿ ಜತ್ತಪ್ಪ ರೈ ಅವರ ಅನುವಾದಿತ ತುಳು ಗೀತಾಂಜಲಿ ಎಂಬ ಕೃತಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಬಿಡುಗಡೆಗೊಳಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು, ಭಾಷಾಂತರದ ಮೂಲಕ ಪರಸ್ಪರ ಬರೆಹಗಳನ್ನು ಹಂಚಿಕೊಳ್ಳುವುದರಿಂದ ಸಾಹಿತ್ಯ, ಸಂಸ್ಕೃತಿ ಮತ್ತು ಭಾಷಾ ಸಂಬಂಧಗಳ ಬೆಸುಗೆ ಸಾಧ್ಯವಿದೆ, ಕನ್ನಡ ಭಾಷೆಯನ್ನು ಇನ್ನೂ ಶ್ರೀಮಂತಗೊಳಿಸಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಡಾ. ಕೆದಂಬಾಡಿ ತಿಮ್ಮಪ್ಪ ರೈ ವಿಟ್ಲ ಅವರು ತುಳು ಗೀತಾಂಜಲಿ ಬಗ್ಗೆ, ಡಾ. ಅಜಕ್ಕಳ ಗಿರೀಶ ಭಟ್ ಅವರು ಪುಸ್ತಕ ಪ್ರಕಟಣಾ ಕಾರ್ಯಗಳ ಕುರಿತು ಹಾಗೂ ಡಾ. ಜೆಡ್ಡು ಗಣಪತಿ ಭಟ್ ಅವರು ಮಲಯಾಳಿ ವಿಷವೈದ್ಯ ಕೃತಿ ಸಂಬಂಧಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃತಿ ಸಂಪಾದಕ ರಾಜಗೋಪಾಲ ಕನ್ಯಾನ ಕೃತಿ ಪ್ರಕಟಣೆ ಕುರಿತು ಮಾತನಾಡಿದರು. ಅಬುಬಕ್ಕರ್ ಅಮ್ಮುಂಜೆ ನಾಡಗೀತೆ ಹಾಡಿದರು. ಗೌರವ ಕಾರ್ಯದರ್ಶಿಗಳಾದ ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದ ಸಮಾರಂಭದಲ್ಲಿ ತಾಲೂಕು ಕಸಾಪ ಸಂಘಟನಾ ಕಾರ್ಯದರ್ಶಿ ಜಯರಾಮ ಪಡ್ರೆ ಸ್ವಾಗತಿಸಿದರು. ಮತ್ತೋರ್ವ ಸಂಘಟನಾ ಕಾರ್ಯದರ್ಶಿ ದಾಮೋದರ ಏರ್ಯ ವಂದಿಸಿದರು. ಕೋಶಾಧ್ಯಕ್ಷ ಅಬ್ದುಲ್ ರಹಿಮಾನ್ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ನುರಿತ ಕಲಾವಿದರಿಂದ ಉಲೂಪಿ ವಿವಾಹ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

View Comments

  • ಕೃತಜ್ಞತೆಗಳು.
    - ರಾಜಗೋಪಾಲ್ ಕನ್ಯಾನ

Recent Posts