ಭಾನುವಾರ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿರುವ ಸುಳ್ಯ ಮಹಾದೇವ ದೇವಸ್ಥಾನದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮದ ಮಂಚಿ ಅಂಗಸಂಸ್ಥೆಯ ವತಿಯಿಂದ ವಾರ್ಷಿಕ ಮಹಾಸಭೆ ನಡೆಯಿತು. ಇದರಲ್ಲಿ ಮುಖ್ಯ ಅತಿಥಿಯಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಮಹೇಶ್ ಕಜೆ ಭಾಗವಹಿಸಿ, ಬ್ರಾಹ್ಮಣ ಮಹಾ ಸಭಾದ ಉದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ, ಈ ಕಾಲಘಟ್ಟದಲ್ಲಿ ಬ್ರಾಹ್ಮಣ ಸಮುದಾಯದವರು ಒಂದೇ ಸೂರಿನಡಿ ಒಂದಾಗುವ ಆಗತ್ಯವನ್ನು ವಿವರಿಸಿದರು.
ಇನ್ನೊರ್ವ ಮುಖ್ಯ ಅತಿಥಿ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮಾ ಸೋಮಯಾಜಿ ಬ್ರಾಹ್ಮಣ ಮಹಾ ಸಭಾದ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಕೂಟ ಮಹಾ ಜಗತ್ತು ಮಂಚಿ ಅಂಗಸಂಸ್ಥೆಯ ಅಧ್ಯಕ್ಷ ವಿ ನಾರಾಯಣ ನಾವಡ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕೇಶವ ರಾವ್ ನೂಜಿಪ್ಪಾಡಿ ಧನ್ಯವಾದ ಸಮರ್ಪಿಸಿದರು.