ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜದಲ್ಲಿ ನಡೆದ ಗುರುವಂದನಾ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯನ್ನು ಊರಿನ ಎಲ್ಲಾ ಹಿರಿಯ ವಿದ್ಯಾರ್ಥಿಗಳ ಸಹಕಾರ ಪಡೆದು ಮೂರು ಪಟ್ಟು ಹೆಚ್ಚು ವಿದ್ಯಾರ್ಥಿಗಳು ದಾಖಲಾಗುವಂತೆ ಮಾಡಿರುವ ಇಂಥ ಸಂದರ್ಭ ಒಮ್ಮೆಲೆ ಎರಡು ಮಂದಿ ಶಿಕ್ಷಕರು ಸೇವಾನಿವೃತ್ತಿ ಹಾಗೂ ವರ್ಗಾವಣೆ ತುಂಬಾ ಬೇಸರದ ವಿಷಯ, ಶಿಕ್ಷಣ ಇಲಾಖೆ ಈ ಬಗ್ಗೆ ಗಮನ ಹರಿಸಿ ಕೂಡಲೇ ಬದಲಿ ಶಿಕ್ಷಕರನ್ನು ನೀಡಿ ಶಾಲೆಯ ಶಿಕ್ಷಕರ ಕೊರತೆಯನ್ನು ನೀಗಿಸಬೇಕು ಎಂದರು.
ನಿವೃತ್ತ ಶಿಕ್ಷಕ ನಾರಾಯಣ ಗೌಡ ಸನ್ಮಾನ ಕಾರ್ಯಕ್ರಮ ನೆರವೇರಿಸಿ, ಅಭಿನಂದನಾ ಭಾಷಣ ಮಾಡಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಶಿಕ್ಷಣದ ಯಜ್ಞದ ಸ್ವತ್ತು ಗುರು ತಾನು ಉರಿದು ವಿದ್ಯಾರ್ಥಿ ಗಳ ಮೂಲಕ ಜಗತ್ತಿಗೆ ಬೆಳಕು ನೀಡುತ್ತಾನೆ ಎಂದರು.
ನಿವೃತ್ತಿ ಹೊಂದುತ್ತಿರುವ ಶಿಕ್ಷಕಿ ಗಾಯತ್ರಿ ದೇವಿ ಶಾಲೆಗೆ ಫೈಬರ್ ಕುರ್ಚಿ, ಮಕ್ಕಳಿಗೆ ಕಿಟ್ ಒದಗಿಸಿದರೆ, ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕಿ ಮಂಜುಳಾ ಬಿಸಿಯೂಟಕ್ಕೆ ಮಿಕ್ಸರ್ ಗ್ರೈಂಡರ್ ಹಾಗೂ ವಿದ್ಯಾರ್ಥಿಗಳಿಗೆ ಕಿಟ್ ನೀಡಿದರು. ಶಿಕ್ಷಕಿಯರನ್ನು ಶಾಲಾ ವತಿಯಿಂದ ಹಾಗೂ ಬಂಟ್ವಾಳ ತಾಲೂಕು ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಬೇಬಿ ಆಳ್ವ ಕಂಪದಬೈಲು ಕೊಡುಗೆಯಾಗಿ ನೀಡಿರುವ ಬೆಲ್ಟ್, ಬ್ಯಾಡ್ಜ್ ಗಳನ್ನು ವಿತರಿಸಲಾಯಿತು. ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶೀಲಾ ನಿರ್ಮಲ ವೇಗಸ್, ಸದಸ್ಯರಾದ ಜಯಪ್ರಸಾದ್, ಸಂದೀಪ್, ಉಮಾವತಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯಂತಿ, ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಕಾರ್ಯದರ್ಶಿ ಹಾಗೂ ಎನ್.ಪಿ.ಯಸ್. ಸಂಘದ ಅಧ್ಯಕ್ಷ ಸಂತೋಷ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಕಾರ್ಯದರ್ಶಿ ಯತೀಶ್, ಸದಸ್ಯರಾದ ವಿಶ್ವನಾಥ ಗೌಡ, ಇಸ್ಮಾಯಿಲ್ ಕೆ , ಶಿಕ್ಷಣ ಸಂಯೋಜಕಿ ಪ್ರತಿಮಾ, ಬಿ .ಐ. ಅರ್. ಟಿ ರವೀಂದ್ರ, ದಕ್ಷಿಣ ಕನ್ನಡ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ನವೀನ್ ಪಿ.ಎಸ್, ಕಲ್ಲಡ್ಕ ಕ್ಲಸ್ಟರ್ ಸಿ ಆರ್ ಪಿ ಜ್ಯೋತಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಪ್ರಧಾನ ಕಾರ್ಯಧರ್ಶಿ ಸಂತೋಷ್ ಶೆಟ್ಟಿ ಸೀನಾಜೆ, ಮೊದಲಾದವರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕ ತಿಮ್ಮಪ್ಪ ನಾಯ್ಕ್ ಸ್ವಾಗತಿಸಿದರು. ಅತಿಥಿ ಶಿಕ್ಷಕಿಯರಾದ ಅಶ್ವಿತಾ ಮತ್ತು ಪ್ರಣಿತ ಸನ್ಮಾನಪತ್ರ ವಾಚಿಸಿದರು. ಅತಿಥಿ ಶಿಕ್ಷಕಿ ನಳಿನಾಕ್ಷಿ ವಂದಿಸಿದರು, ಶಿಕ್ಷಕಿ ಉಷಾ ಸುವರ್ಣ ಕಾರ್ಯಕ್ರಮ ನಿರೂಪಿಸಿದರು, ಕೆ ಜಿ ಶಿಕ್ಷಕಿ ರೋಶನಿ ಸಹಕರಿಸಿದರು.
Be the first to comment on "ಕೆಲಿಂಜದ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ"