ಆಗಸ್ಟ್ 6 ರಂದು ಭಾನುವಾರ ಪೂರ್ವಾಹ್ನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸವನ್ನು ಪ್ರಧಾನಿ ನರೇಂದ್ರ ಮೋದಿಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಮಾಡಲಿದ್ದಾರೆ.
ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ರೈಲ್ವೆ ನಿಲ್ದಾಣ ಹೇಗಾಗಲಿದೆ. ಇಲ್ಲಿದೆ ಫೊಟೋಸ್..