ಬಂಟ್ವಾಳ: ಸುಮಾರು 32 ವರ್ಷ ಅಡುಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವಾನಿವೃತ್ತಿ ಹೊಂದಿದ ಕೆ. ಸುಶೀಲ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.ಪಾಣೆಮಂಗಳೂರು ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಭವ್ಯ ಪಿ. ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭ ಇಲಾಖೆಯ ರುಕ್ಮಿಣಿ, ಸಿಬ್ಬಂದಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ವರ್ಷಿಣಿ ಸ್ವಾಗತಿಸಿ, ಖುಷಿ ವೈ ವಂದಿಸಿದರು. ಮೊಡಂಕಾಪು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಪ್ರಸಾದ್ ನಿರೂಪಿಸಿ, ಸನ್ಮಾನ ಪತ್ರ ವಾಚಿಸಿದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…