ವೀರಕಂಭ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧಕ ಸಂಸ್ಥೆ, ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ ಸ್ನೇಹ ಸಂಜೀವಿನಿ ಗ್ರಾಮಮಟ್ಟದ ಒಕ್ಕೂಟ ವೀರಕಂಬ ಗ್ರಾಮ, ಗ್ರಾಮ ಪಂಚಾಯತ್ ವೀರಕಂಬ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್ ಆಟಿ ತಿಂಗಳ ಮಹತ್ವ ಹಾಗೂ ಈ ಸಮಯದಲ್ಲಿ ಪೂರ್ವಿಕರು ಬಳಸುತ್ತಿದ್ದ ಆಹಾರ ಪದ್ಧತಿ ಬಗ್ಗೆ ಮಾಹಿತಿ ಹಂಚಿಕೊಂಡರು.
ವೀರಕಂಭ ಗ್ರಾಮ ಒಕ್ಕೂಟ ಅಧ್ಯಕ್ಷ ವಿಜಯ ಶೇಖರ್ ಗ್ರಾಮಮಟ್ಟದಲ್ಲಿ ಇಂತಹ ಕಾರ್ಯಕ್ರಮ ನಡೆಸುವ ಉದ್ದೇಶ ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಎಲ್ಲಾ ಸಂಜೀವಿನಿ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು, ಸಂಜೀವಿನಿ ಸದಸ್ಯರು ಪಾರ್ದನ ಹಾಗೂ, ನೇಜಿ ನಾಟಿ ಸಂದರ್ಭದಲ್ಲಿ ಹಾಡುತ್ತಿದ್ದ ಹಾಡನ್ನು ಹಾಡಿದರು. ಸ್ನೇಹ ಸಂಜೀವಿನಿ ಸದಸ್ಯರು ಆಟಿ ಸಂದರ್ಭದಲ್ಲಿ ಮಾಡುವ ತಿಂಡಿ ತಿನಸುಗಳನ್ನು ತಮ್ಮ ತಮ್ಮ ಮನೆಯಲ್ಲಿ ಮಾಡಿ ತಂದಿದ್ದು ಪರಸ್ಪರ ಹಂಚಿಕೊಂಡು ಸಂಭ್ರಮಿಸಿದರು.
ಗ್ರಾಮ ಪಂಚಾಯತ್ ಸದಸ್ಯರಾದ ಸಂದೀಪ್, ಜಯಂತಿ, ಸ್ನೇಹ ಸಂಜೀವಿನಿ ವೀರಕಂಬ ಒಕ್ಕೂಟ ಕಾರ್ಯದರ್ಶಿ ದೀಪ, ಎಂ ಬಿ ಕೆ ಮಲ್ಲಿಕಾ ಶೆಟ್ಟಿ, ಎಲ್ ಸಿ ಆರ್ ಜಯಂತಿ, ವೀರಕಂಬ ಗ್ರಾಮ ಪಶುಸಖಿ ಪ್ರಚೀನ, ಕೃಷಿಸಖಿ ವಿಜಯಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು. ಸ್ನೇಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ವೀರಕಂಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಬಿ ಆರ್, ಸ್ವಾಗತಿಸಿ ವಂದಿಸಿದರು,