ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ. ಬಂಟ್ವಾಳ ವ ತಿಯಿಂದ ಬಂಟ್ವಾಳದ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ನೇತ್ರ ತಪಾಸಣಾ ಶಿಬಿರ ನಡೆಯಿತು.ಕೆ.ಎಸ್.ಹೆಗ್ಡೆ ಆಸ್ಪತ್ರೆ ವೈದ್ಯ ಹೃಷಿಕೇಶ್ ಅಮೀನ್ ಉದ್ಘಾಟಿಸಿ ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಮಹಾಬಲ ಕುಲಾಲ್ ಶುಭ ಹಾರೈಸಿದರು. ಯೋಜನಾಧಿಕಾರಿ ಮಾಧವ ಗೌಡ, ಫರಂಗಿಪೇಟೆ ಸೇವಾಂಜಲಿ ಟ್ರಸ್ಟಿ ಕೆ.ಕೆ.ಪೂಂಜ, ಜನಜಾಗೃತಿ ವೇದಿಕೆ ಸದಸ್ಯರಾದ ಶೇಖರ್, ಸದಾನಂದ ಗೌಡ, ಒಕ್ಕೂಟದ ಅಧ್ಯಕ್ಷರಾದ ಪದ್ಮನಾಭ ಗೌಡ, ದಿನೇಶ್, ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. ಮೇಲ್ವಿಚಾರಕರಾದ ರೂಪಾ ಜೆ. ರೈ, ವೇದಾವತಿ ನಿರೂಪಿಸಿದರು. ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿದರು.ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಚಂದ್ರಮೋಹಿನಿ ಧನ್ಯವಾದ ನೀಡಿದರು. ಒಟ್ಟು 245 ಮಂದಿ ಚಿಕಿತ್ಸೆ ಪಡೆದರು. 50 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.15 ಮಂದಿಗೆ ಉಚಿತ ಕಣ್ಣಿನ ಪೊರೆ ಚಿಕಿತ್ಸೆ ಮಾಡಲು ಜ.ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಕಳುಹಿಸಲಾಯಿತು.
Be the first to comment on "ಬಂಟ್ವಾಳದಲ್ಲಿ ನೇತ್ರ ತಪಾಸಣಾ ಶಿಬಿರ"