ಬಂಟ್ವಾಳ ತಾಲೂಕಿನ ಮಂಚಿ ಗ್ರಾ.ಪಂ.ನ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ಗುರುವಾರ ಗ್ರಾ.ಪಂ.ಕಚೇರಿಯಲ್ಲಿ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಜಿ.ಎಂ.ಇಬ್ರಾಹಿಂ ಹಾಗೂ ಉಪಾಧ್ಯಕ್ಷರಾಗಿ ಗೀತಾ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್ ಬೆಂಬಲಿತರು. ಗ್ರಾ.ಪಂ.ನ ಒಟ್ಟು 21 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಿ.ಪಂ.ಇಬ್ರಾಹಿಂ 12 ಮತ, ಮೋಹನದಾಸ ಶೆಟ್ಟಿ 9 ಮತ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಗೀತಾ 11 ಮತ, ವಿಜಯ ನಾಯ್ಕ್ 10 ಮತಗಳನ್ನು ಪಡೆದಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಪ್ರಸನ್ನ ಅವರು ಆಯ್ಕೆ ಪ್ರಕ್ರಿಯೆ ನಡೆಸಿದ್ದು, ಪಿಡಿಒ ನಿರ್ಮಲ ಅವರು ಸಹಕರಿಸಿದರು.