ದ.ಕ. ಜಿಲ್ಲಾ ಟೂರಿಸ್ಟ್ ಕಾರು ಚಾಲಕ-ಮಾಲೀಕರ ಸಂಘ ಬಿ.ಸಿ.ರೋಡ್ ೪೦ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ನಲ್ಲಿ ಬಿ.ಎಂ.ಪ್ರಭಾಕರ ದೈವಗುಡ್ಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭ ಬಿ.ಎಂ. ಪ್ರಭಾಕರ ದೈವಗುಡ್ಡೆ ಅವರನ್ನು ಸನ್ಮಾನಿಸಲಾಯಿತು.
ಜಾಹೀರಾತು
ಕೇಂದ್ರ ಮೀಸಲು ಪೋಲಿಸ್ ಪಡೆ ಓಡಾಟ ನಡೆಸಿದ ಪುತ್ತೂರು, ಬೆಳ್ತಂಗಡಿ , ಸುಳ್ಯ, ಬಂಟ್ವಾಳ ವಾಹನಗಳಿಗೆ ಸರಿಯಾಗಿ ಬಾಡಿಗೆ ಕೊಡಲಿಲ್ಲ ಎಂಬ ದೂರುಗಳು ಕೇಳಿಬಂದವು. ಬ್ರಹ್ಮರಕೂಟ್ಲು ಟೋಲ್ಗೇಟ್ ಕೂಡಲೇ ತೆರವುಗೊಳಿಸಬೇಕು ಇಲ್ಲದಿದ್ದಲ್ಲಿ ಊರಿನ ಸಾರ್ವಜನಿಕರ ಬೆಂಬಲದೊಂದಿಗೆ ತೀವ್ರವಾಗಿ ಹೋರಾಟ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರಭಾಕರ ದೈವಗುಡ್ಡೆ, ಉಪಾಧ್ಯಕ್ಷ ಪುರುಷೋತ್ತಮ ನಾಟಿ, ಕೋಶಾಧಿಕಾರಿ ರಾಘವೇಂದ್ರ ರಾವ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ರೋಡ್ರಿಗಸ್ ಫರ್ಲಾ ವರದಿ ವಾಚಿಸಿದರು. ಸುರೇಶ್ ಬಂಗೇರಾ ಸಂಚಯಗಿರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿ.ಸಿ.ರೋಡ್: ದ.ಕ.ಜಿಲ್ಲಾ ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಭೆ, ಸನ್ಮಾನ"