ಬಂಟ್ವಾಳ: ವಿದ್ಯಾರ್ಥಿಗಳು ಸಾಹಿತ್ಯ ವಾಚನದಿಂದ ರಸಾಸ್ವಾದನೆ ಮಾಡಬೇಕು. ಭಾಷಾ ಜ್ಞಾನ ಮತ್ತು ವಿಷಯ ಪ್ರಾವಿಣ್ಯತೆ ಪಡೆಯಬೇಕು. ಸಾಹಿತ್ಯ ಸ್ವರಚನೆಯಲ್ಲೂ ತೊಡಗಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಸಾಹಿತ್ಯ ಪೂರಕವಾಗುತ್ತದೆ ಎಂದು ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ರಮೇಶ ಎಂ. ಬಾಯಾರು ಹೇಳಿದರು.
ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಒಂದು ದಿನದ ಸಾಹಿತ್ಯ ಸ್ವರಚನೆ ಪ್ರೇರಣಾ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಲ್ಲಡ್ಕ ಮತ್ತು ಬಾಳ್ತಿಲ ಕ್ಲಸ್ಟರ್ ಗಳ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದರು. ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಸಾಹಿತಿ ಭಾಸ್ಕರ ಅಡ್ವಳ ಸಹಕರಿಸಿದರು. ನರಿಕೊಂಬು ಶಾಲಾ ಮುಖ್ಯ ಶಿಕ್ಷಕ ಜಯರಾಮ ಪಡ್ರೆ ಉಪಸ್ಥಿತರಿದ್ದರು.. ಮಕ್ಕಳ ಕಲಾ ಲೋಕದ ಉಪಾಧ್ಯಕ್ಷ ಶಿವರಾಮ ಭಟ್ ನೆಡ್ಲೆ ಸ್ವಾಗತಿಸಿ ವಂದಿಸಿದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…