ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಬಂಟ್ವಾಳ ತಾಲೂಕಾಡಳಿತದ ವತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಸ್ವಾತಂತ್ರೋತ್ಸವವನ್ನು ತಾಲೂಕಾಡಳಿತ ಸೌಧದಲ್ಲಿ ಮಂಗಳವಾರ ಆಚರಿಸಲಾಯಿತು.
ತಹಸೀಲ್ದಾರ್ ಎಸ್.ಬಿ. ಕೂಡಲಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಗೃಹರಕ್ಷಕದಳ, ಎನ್‌ಸಿಸಿ, ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆದು ಅತಿಥಿಗಳು ಗೌರವವಂದನೆ ಸ್ವೀಕರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಸಕರಾತ್ಮಕ ವಿಚಾರಗಳಿಗೆ ಹೆಚ್ಚು ಒತ್ತು ನೀಡಿದಾಗ ಕೆಟ್ಟ ವಿಚಾರಗಳು ತನ್ನಿಂದ ತಾನೆ ದೂರವಾಗುತ್ತದೆ. ಬಲಿಷ್ಠವಾದ ರಾಷ್ಟ್ರ ನಿರ್ಮಾಣಕ್ಕೆ ಯುವಪೀಳಿಗೆಯ ಸಹಕಾರ ಬೇಕು ಎಂದರು.
ತುಂಬೆ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಗಂಗಾಧರ ಆಳ್ವ ಪ್ರಧಾನ ಭಾಷಣ ಮಾಡಿ ಪತಾಕೆ ಹಾರಿಸಿದರೆ ಮಾತ್ರ ಅದು ರಾಷ್ಟ ಪ್ರೇಮವಲ್ಲ, ನಮ್ಮ ನಡೆ ನುಡಿಗಳನ್ನು, ಕರ್ತವ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅದು ರಾಷ್ಟ್ರಪ್ರೇಮವಾಗಲಿದೆ ಎಂದರು.
ತಹಸೀಲ್ದಾರ್ ಎಸ್. ಬಿ. ಕೂಡಲಗಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ನೆನೆಪಿಸುವ ದಿನ ಇದಾಗಿದೆ ಎಂದರು. ಈ ಸಂದರ್ಭ ತೋಟಗಾರಿಕಾ ಇಲಾಖೆಯ ವತಿಯಿಂದ ತಾಳೆಬೆಳೆ ನಾಟಿ ಅಭಿಯಾನಕ್ಕೆ ಶಾಸಕ ರಾಜೇಶ್ ನಾಕ್ ಚಾಲನೆ ನೀಡಿದರು. ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಸ್ವಾಗತಿಸಿದರು. ತಾ.ಪಂ. ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ದಿನೇಶ್ ವಂದಿಸಿದರು. ಕಂದಾಯ ನಿರೀಕ್ಷಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಸಕಾರಾತ್ಮಕ ವಿಚಾರಗಳಿಗೆ ಒತ್ತು ನೀಡಿದರೆ ದೇಶ ಅಭಿವೃದ್ಧಿ: ಶಾಸಕ ರಾಜೇಶ್ ನಾಯ್ಕ್"