Categories: Uncategorized

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಬ್ಲೇಡ್ ಸಾದಿಕ್ ಸೆರೆ

ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ವಿಟ್ಲ ದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್(35) ಬಂಧಿತ ಆರೋಪಿ.

ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಈತ  ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ  ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಈತನನ್ನು ಬಂಧಿಸಿದ್ದಾರೆ.

ಈತನ ವಶದಿಂದ ಒಟ್ಟು 50 ಗ್ರಾಂ ತೂಕದ ರೂ. 2,50,000/-ಮೌಲ್ಯದ  ಎಂಡಿಎಂಎ ಮಾದಕ ವಸ್ತು, ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 3,65,500/- ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್ ಎಂಬಾತನ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 8 ಹಲ್ಲೆ, ಬೆದರಿಕೆ ಪ್ರಕರಣಗಳು, 4 ಕೊಲೆ ಯತ್ನ ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ,ಉಪ್ಪಿನಂಗಡಿ ಠಾಣೆಯಲ್ಲಿ ಮಾನಭಂಗ ಹಾಗೂ ಕಿಡ್ನಾಫ್ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಬೆಂಗಳೂರು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಹೀಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 6 ತಿಂಗಳಿನಿಂದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುಧ್ದ ನ್ಯಾಯಾಲಯವು ವಾರಂಟ್ ಹೊರಡಿಸಿದೆ.

ಆರೋಪಿ ಮತ್ತು ಮಾದಕ ವಸ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts