ಸೌಜನ್ಯಾ ಹತ್ಯೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಬಂಟ್ವಾಳ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ ಬಂಟ್ವಾಳ ತಾಲೂಕು ಸಂಚಾಲಕ ಪ್ರತೀಕ್ ಬಂಟ್ವಾಳ ನೇತೃತ್ವದಲ್ಲಿ ಈ ಮನವಿಯನ್ನು ಮಾಡಲಾಯಿತು.
ನೈಜ ಅಪರಾಧಿಗಳನ್ನು ಪತ್ತೆ ಮಾಡಿ ಬಂದಿಸಿ ಸೌಜನ್ಯಳಿಗೆ ಹಾಗೂ ನೊಂದ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ. ಒಂದು ವೇಳೆ ರಾಜ್ಯ ಸರ್ಕಾರವು ಮರು ತನಿಖೆಗೆ ಆದೇಶಿಸದೆ ನ್ಯಾಯ ಒದಗಿಸುವಲ್ಲಿ ವಿಫಲವಾದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು. ಸೌಜನ್ಯ ಹಾಗೂ ಸಂಬಂಧಿತ ಘಟನೆಯನ್ನು ದಾಳವಾಗಿ ಉಪಯೋಗಿಸಿ ಧಾರ್ಮಿಕ ಶ್ರದ್ದಾ ಕೇಂದ್ರಗಳ ಘನತೆಗೆ ಮತ್ತು ಸಾಮಾನ್ಯ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಕರಣಗಳು ಕಂಡು ಬರುತ್ತಿದ್ದು ಇದನ್ನು ರಾಜ್ಯ ಸರ್ಕಾರ ಗಮನಿಸಿ ಕೂಡಲೆ ಹತ್ತಿಕ್ಕಬೇಕು ಎಂದೂ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಈ ಸಂದರ್ಭ ಬಂಟ್ವಾಳ ತಾಲೂಕು ಸಂಚಾಲಕರಾದ ಪ್ರತೀಕ್ ಬಂಟ್ವಾಳ ಹಾಗೂ ಎಬಿವಿಪಿ ಪ್ರಮುಖರಾದ ಸುಶಾಂತ್ ,ಕಿಶೋರ್, ಇಂಚರಾ, ಪುನೀತ್ ಉಪಸ್ಥಿತರಿದ್ದರು