ಬಂಟ್ವಾಳ

ಮಹಿಳೆ ಸ್ನಾನ ಮಾಡುವಾಗ ಮೊಬೈಲ್ ಚಿತ್ರೀಕರಣ: ಆರೋಪಿ ಸೆರೆ

ಮಹಿಳೆಯೊಬ್ಬರು ಸ್ನಾನ ಮಾಡುವ ಸಂದರ್ಭ ವ್ಯಕ್ತಿಯೊಬ್ಬ ಮೊಬೈಲ್ ನಿಂದ ಗೋಡೆ ಸೆರೆಯ ಮಧ್ಯೆ ಚಿತ್ರೀಕರಿಸಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದೂರು ಬಂದ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅನುಮಾನಾಸ್ಪದ ವರ್ತನೆಯ ವ್ಯಕ್ತಿಯೋರ್ವನನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತನನ್ನು ಜಗದೀಪ್ ಎಂದು ಗುರುತಿಸಲಾಗಿದೆ.

ಜಾಹೀರಾತು

ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ರಾತ್ರಿ ಮಹಿಳೆ ತನ್ನ ಹಂಚಿನಮನೆಯೊಳಗಿರುವ ಬಚ್ಚಲುಕೋಣೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಹೊರಗಡೆಯಿಂದ ಗೋಡೆಯ ಸೆರೆಯ ಮಧ್ಯೆ ತನ್ನ ಮೊಬೈಲ್ ಮೂಲಕ ಮಹಿಳೆ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದನ್ನು ಗಮನಿಸಿ, ತಕ್ಷಣ ಬೊಬ್ಬೆ ಹೊಡೆದಿದ್ದಾರೆ. ಈ ಸಂದರ್ಭ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದಾನೆ. ಬಳಿಕ ಮಹಿಳೆಯ ಬೊಬ್ಬೆ ಕೇಳಿ, ತಾಯಿ ಮತ್ತು ಅಕ್ಕಪಕ್ಕದ ಮನೆಯವರು ಬಂದು, ಓಡಿಹೋದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದರೂ ಆತ ಕಂಡುಬಂದಿಲ್ಲ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅನುಮಾನದಲ್ಲಿ ಜಗದೀಪ್ ನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡರು. ಇದೀಗ ಆತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts