ದಕ್ಷಿಣ ಕನ್ನಡ ಜಿಲ್ಲೆಯ ಕಾವಳಪಡೂರು ಗ್ರಾಮದ ಮಧ್ವಗುತ್ತುವಿನ ಮಿತ್ರಾ ಶೆಟ್ಟಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ..ಪದವಿ ಮುಗಿಸಿ, ನ್ಯಾಯವಾದಿಯೊಬ್ಬರ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ 23ರ ಹರೆಯದ ಮಿತ್ರಾ ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲೂ ಸಕ್ರಿಯರಾಗಿದ್ದರು. ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿ. ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‌ನಲ್ಲಿ ಉದ್ಯೋಗದಲ್ಲಿದ್ದರು. ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಹೃದಯಾಘಾತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರೆಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹೃದಯಾಘಾತ: ಮಲಗಿದ್ದಲ್ಲೇ ಯುವತಿ ಸಾವು"
Be the first to comment on "ಹೃದಯಾಘಾತ: ಮಲಗಿದ್ದಲ್ಲೇ ಯುವತಿ ಸಾವು"