ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯನ್ನು ಗುರುವಾರ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು ಸಂಘರ್ಷರಹಿತ ಹೋರಾಟ ನಡೆಸಿದ್ದು, ಇದು ಎಲ್ಲರಿಗೂ ಆದರ್ಶ. ಇಡೀ ಸಮಾಜದ ಬದಲಾವಣೆಗೆ ಗುರುಗಳ ಆದರ್ಶ ಪ್ರೇರಣೆಯಾಗಿದೆ. ಮಾನವಕುಲಕ್ಕೆ ಗುರುಗಳು ಪ್ರೇರಣೆ ಎಂದರು.

ಬಂಟ್ವಾಳ  ತಹಸೀಲ್ದಾರ್ ಎಸ್.ಬಿ.ಕೂಡಲಗಿ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕ ಚೇತನ್ ಮುಂಡಾಜೆ ಆಚರಣೆಯ ಪ್ರಸ್ತುತತೆ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ವಿಚಾರಧಾರೆಯ ಅಗತ್ಯ ಕುರಿತು ಮಾತನಾಡಿ, ಯುಗದ ಕಣ್ಣು ತೆರೆಸಿದ ಸಂತ ನಾರಾಯಣಗುರುಗಳು, ಸಾಮಾಜಿಕ ವ್ಯವಸ್ಥೆಯ ಬದಲಾವಣೆ, ಸುಧಾರಣೆಗೆ ಶ್ರೀಗಳು ಶ್ರಮಿಸಿದ್ದರು ಎಂದರು. ಪ್ರತ್ಯೇಕ ದೇವಾಲಯಗಳನ್ನು ಸ್ಥಾಪಿಸುವುದು, ಶಿಕ್ಷಣಕ್ಕೆ ಪ್ರಾಧಾನ್ಯತೆ, ಸರ್ವಧರ್ಮ ಸಮ್ಮೇಳನ ಆಯೋಜನೆ, ಸರಳ ವಿವಾಹ ಪರಿಕಲ್ಪನೆ, ವರದಕ್ಷಿಣೆ ಪಿಡುಗು ನಿವಾರಣೆ ಕುರಿತು ಅವರ ನಿಲುವುಗಳು ಗಮನಾರ್ಹ ಎಂದರು.

ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ  ಸಂಜೀವ ಪೂಜಾರಿ ಗುರುಕೃಪ, ತಾಲೂಕು ಬಿಲ್ಲವ ಮಹಿಳಾ ಘಟಕ ಅಧ್ಯಕ್ಷೆ ಶೈಲಜಾ ರಾಜೇಶ್, ಯುವ ವಾಹಿನಿ ಅಧ್ಯಕ್ಷ ಹರೀಶ್ ಕೋಟ್ಯಾನ್, ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ, ಕೋಶಾಧಿಕಾರಿ ಆನಂದ ಸಾಲಿಯಾನ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಅಮ್ಟಾಡಿ ಗ್ರಾಪಂ ಅಧ್ಯಕ್ಷ ವಿಜಯ್,  ಸಹಿತ ವಿವಿಧ ಸಾಮಾಜಿಕ, ರಾಜಕೀಯ ಮುಖಂಡರು ಉಪಸ್ಥಿತರಿದ್ದರು. ಜನಾರ್ದನ ಸ್ವಾಗತಿಸಿದರು. ಉಪತಹಸೀಲ್ದಾರ್ ನವೀನ್  ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಶ್ರೀಕಲಾ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts