ಸರಕಾರವೇ ಗುರುಜಯಂತಿ ಆಚರಿಸುವುದು ಸಮಾಜ ಜಾಗೃತಿಗೆ ಸಾಕ್ಷಿ: ಪ್ರಣವಾನಂದ ಸ್ವಾಮೀಜಿ

ಜಾಹೀರಾತು

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ರಾಜ್ಯ ಮಟ್ಟದಲ್ಲಿ ಆಚರಣೆಯಾಗುತ್ತಿದ್ದು ಸಮಾಜ ಜಾಗೃತಿ, ಪರಿವರ್ತನೆಯತ್ತ ಹೋಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಕಲ್ಬುರ್ಗಿ ಬ್ರಹ್ಮಶ್ರೀ ನಾರಾಯಣ ಶಕ್ತಿ ಪೀಠದ ಪೀಠಾಧಿಪತಿ ಶ್ರೀ ಡಾ. ಪ್ರಣವಾನಂದ ರಾಮ್ ಸ್ವಾಮೀಜಿ ಹೇಳಿದರು.

ಸಜೀಪಮೂಡ ಗ್ರಾಮದ  ಸುಭಾಷ್ ನಗರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ವರ್ಯರ ೧೬೯ ನೇ ಜನ್ಮದಿನಾಚರಣೆ ಪ್ರಯುಕ್ತ ನಡೆದ ಗುರುಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಇಂದು ವ್ಯಕ್ತಿ ನಿಷ್ಠೆ, ಪಕ್ಷ ನಿಷ್ಠೆ ಹೆಚ್ಚಾಗಿ ಸಮಾಜ ನಿಷ್ಠೆ ಕಡಿಮೆಯಾಗಿದ್ದು ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ಪಕ್ಷ ಎನ್ನುವುದನ್ನು ಅರಿತುಕೊಳ್ಳಬೇಕಾಗಿದೆ ಎಂದರು

ಜಾಹೀರಾತು

ಗೌರವಾಧ್ಯಕ್ಷ ಕೆ. ಸಂಜೀವ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬ್ರಹ್ಮಶ್ರೀ  ನಾರಾಯಣ ಗುರು ಶಕ್ತಿ ಪೀಠದ ಉಪಾಧ್ಯಕ್ಷ  ಜಿತೇಂದ್ರ ಪೂಜಾರಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ  ಗಿರೀಶ್ ಕುಮಾರ್ ಪೆರ್ವ ವಹಿಸಿದ್ದರು. ಸಜೀಪ ಮಾಗಣೆಯ ಶ್ರೀ ನಾಲ್ಕೈತ್ತಾಯ ದೈವದ ಪಾತ್ರಿ  ಶಂಕರ ಯಾನೆ ಕೋಚ ಪೂಜಾರಿ, ನಾಟಿ ವೈದ್ಯರಾದ  ಗಂಗಯ ಪೂಜಾರಿ, ವೀರಪ್ಪ ಪೂಜಾರಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಯಶಂಕರ್ ಕಾನ್ಸಲೆ ಸ್ವಾಗತಿಸಿದರು,  ಕೋಶಾಧಿಕಾರಿ ರಮೇಶ್ ಅನ್ನಪ್ಪಾಡಿ ವಂದಿಸಿದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಕಾರವೇ ಗುರುಜಯಂತಿ ಆಚರಿಸುವುದು ಸಮಾಜ ಜಾಗೃತಿಗೆ ಸಾಕ್ಷಿ: ಪ್ರಣವಾನಂದ ಸ್ವಾಮೀಜಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*