ಶುಭ ಸಮಾರಂಭಗಳು ಸಮಾಜಕ್ಕೆ ಸಂತಸ ನೀಡಬೇಕೇ ಹೊರತು ಸಮಾಜದ ಯುವ ಜನಾಂಗ ಮಾದಕ ವ್ಯಸನಕ್ಕೆ ಬಲಿಯಾಗಲು ವೇದಿಕೆಯಾಗಬಾರದು. ಮದ್ಯ, ತಂಬಾಕು ಸೇವನೆಯಿಂದ ಯುವ ಜನಾಂಗ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಖೇದಕರ ಎಂದು ನಿವೃತ್ತ ಮಲೇರಿಯಾ ಪರಿವೀಕ್ಷಣಾಧಿಕಾರಿ ಜಯರಾಮ ಪೂಜಾರಿ ಹೇಳಿದರು.
ಜಾಹೀರಾತು
ಜೇಸಿಐ ಜೋಡುಮಾರ್ಗ ನೇತ್ರಾವತಿ ಹಾಗು ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಮಾದಕ ವ್ಯಸನದ ಬಗೆಗಿನ ಜಾಗೃತಿ ಶಿಬಿರದಲ್ಲಿ ಮಾದಕ ವ್ಯಸನಗಳಿಂದಾಗುವ ಅನಾಹುತಗಳ ಬಗ್ಗೆ ತಿಳಿಸಿದರು. ಶಾಲಾ ಮುಖ್ಯಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಸುರೇಶ್ ಸಾಲ್ಯಾನ್, ಜೇಸಿಐ ಅಧ್ಯಕ್ಷೆ ಗಾಯತ್ರಿ ಲೋಕೇಶ್, ನಿಕಟಪೂರ್ವಾಧ್ಯಕ್ಷ ಹಾಗು ಶಿಕ್ಷಕರಾದ ಹರಿಪ್ರಸಾದ್ ಕುಲಾಲ್, ಜೇಜೇಸಿ ಅಧ್ಯಕ್ಷೆ ರಶ್ಮಿತಾ, ಶಾಲಾ ವಿದ್ಯಾರ್ಥಿ ನಾಯಕಿ ಸಾನ್ವಿ, ಶಾಲಾ ಶಿಕ್ಷಕರು ಹಾಗು ರೋಟರಿ ಸದಸ್ಯರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಾದಕ ವ್ಯಸನ: ಬೊಂಡಾಲ ಹೈಸ್ಕೂಲ್ ನಲ್ಲಿ ಜಾಗೃತಿ ಕಾರ್ಯಕ್ರಮ"
Be the first to comment on "ಮಾದಕ ವ್ಯಸನ: ಬೊಂಡಾಲ ಹೈಸ್ಕೂಲ್ ನಲ್ಲಿ ಜಾಗೃತಿ ಕಾರ್ಯಕ್ರಮ"