ಬಂಟ್ವಾಳ: ಇತ್ತೀಚೆಗೆ ನಿಧನರಾದ ಹಿರಿಯ ಕಲಾವಿದ ಮಂಜು ವಿಟ್ಲ ಅವರಿಗೆ ಬಂಟ್ವಾಳದ ಚಿಣ್ಣರ ಲೋಕ ಮೋಕೆದ ಕಲಾವಿದೆರ್ (ರಿ) ವತಿಯಿಂದ ಶ್ರದ್ಧಾಂಜಲಿ ಸಭೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆಯಿತು. ಚಿಣ್ಣರ ಲೋಕದ ಗೌರವ ಸಲಹೆಗಾರರೂ ಆಗಿರುವ ಅವರ ಕುರಿತು ಸಂಸ್ಥೆ ಅಧ್ಯಕ್ಷ ಮೋಹನದಾಸ ಕೊಟ್ಟಾರಿ ಮುನ್ನೂರು, ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್ ಮಾತನಾಡಿದರು. ಈ ಸಂದರ್ಭ ಚಿಣ್ಣರ ಲೋಕ ಸೇವಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಬಾಲಾಜಿಬೈಲು ಚಂದ್ರಹಾಸ ರೈ, ನಿರ್ದೇಶಕರಾದ ತಾರಾನಾಥ ಕೊಟ್ಟಾರಿ ಮೊದಲಾದವರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)