ಬಂಟ್ವಾಳ ಕಮ್ಯೂನಿಟಿ ಸೆಂಟರ್ ನಿಂದ ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ತರಗತಿ ಉದ್ಘಾಟನೆ

ಬಂಟ್ಚಾಳ: ಶಿಕ್ಷಣವು ಸ್ವಂತ ತಮ್ಮನ್ನು ಬದಲಾಯಿಸುವುದರ ಜೊತೆಗೆ ತಮ್ಮ ಕುಟುಂಬ, ಸಮಾಜವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ಹಾಗಾಗಿ ವಿದ್ಯಾರ್ಥಿಗಳು ನಿರ್ದಿಷ್ಠ ಗುರಿ, ಕನಸನ್ನು ಹೊಂದುವ ಮೂಲಕ ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಇದರ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಹೇಳಿದರು.

ಜಾಹೀರಾತು

ಬಂಟ್ವಾಳ ಕಮ್ಯೂನಿಟಿ ಸೆಂಟರ್ ಹಾಗೂ ದಿ ನಾಲೇಜ್ಡ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಕೈಕಂಬ, ಬಿ.ಸಿ.ರೋಡ್ ಇದರ ವತಿಯಿಂದ ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತೀ ಭಾನುವಾರ ನಡೆಯುವ ಫ್ರೀ ಟ್ಯೂಷನ್ ತರಗತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಮ್ಯೂನಿಟಿ ಸೆಂಟರ್ ವಿದ್ಯಾರ್ಥಿಗಳನ್ನು ನಿರಂತರ ಸಂಪರ್ಕದಲ್ಲಿ ಇಟ್ಟುಕೊಂಡು ಶೈಕ್ಷಣಿಕ ಗುರಿ ಸಾಧನೆಗೆ ಶ್ರಮಿಸುತ್ತಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಇರುವ ಬಂಟ್ವಾಳ ತಾಲೂಕಿನಲ್ಲಿ ಕಮ್ಯೂನಿಟಿ ಸೆಂಟರ್ ಕಾರ್ಯಾಚರಿಸುತ್ತಿರುವುದು ಶಾಘ್ಲನೀಯ. ಕಮ್ಯೂನಿಟಿ ಸೆಂಟರ್ ನ ಕಾರ್ಯಕ್ರಮಗಳ ಸದುಪಯೋಗ ಪಡೆಯುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಗುರಿಯನ್ನು ತಲುಪಿರಿ ಎಂದು ಕರೆ ನೀಡಿದರು.

ಜಾಹೀರಾತು

ಕೋಸ್ಟಲ್ ವುಡ್ ಟಿಂಬರ್ ಮತ್ತು ಪ್ಲೈವುಡ್ ಸಂಸ್ಥಾಪಕ ಮುಹಮ್ಮದ್ ಹನೀಫ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪತ್ರಕರ್ತ ಇಮ್ತಿಯಾಝ್ ಶಾ ತುಂಬೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ನಝ್ರೀನ್ ಶಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕಮ್ಯೂನಿಟಿ ಸೆಂಟರ್ ನಿಂದ ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ತರಗತಿ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*