ಬಂಟ್ವಾಳ

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ಆಶ್ರಯದಲ್ಲಿ “ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ” ವು
ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ  ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎಂ.ಎನ್. ಮಾತನಾಡಿ ಮಕ್ಕಳ ಮೇಲೆ ಅತಿಯಾದ ಒತ್ತಡ, ಅತಿಯಾದ ನಿರೀಕ್ಷೆ ಅಥವಾ ಮಕ್ಕಳ ಮೇಲಿನ ಕಾಳಜಿ ರಹಿತ ಪೋಷಕತ್ವ ಕೆಲವೊಮ್ಮೆ ಮಕ್ಕಳ ನೈಜ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ, ಮಗುವಿನ ಪರಿಪೂರ್ಣ ಬೆಳವಣಿಗೆಗೆ ಪೂರಕವಾದ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದ ಅವರು ವ್ಯಸನಿಗಳಿಗೆ ಯಾವುದೇ ಧರ್ಮವಿಲ್ಲ ಅವರಿಗೆ ವ್ಯಸನವೇ ಧರ್ಮ, ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಾತನಾಡಿ ದೇಶದ ಸಾಧಕರ ಪಟ್ಟಿಯಲ್ಲಿ ಇರಬೇಕಾದ ಯುವಜನತೆ ಕ್ಷಣಿಕ ಸುಖಕ್ಕಾಗಿ ಅಮಲು ಪದಾರ್ಥಗಳ ದಾಸರಾಗುತ್ತಿರುವುದು ದುರಂತ. ಇದನ್ನು ನಿವಾರಿಸಲು ಮನೆ ಮನೆಗಳಲ್ಲಿ ಮಾದಕ ವ್ಯಸನದ ಬಗ್ಗೆ
ಜಾಗೃತಿ ಉಂಟಾಗಬೇಕಾದ ಅವಶ್ಯಕತೆ ಇದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಯುಕ್ತ ಜಮಾಅತ್ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಇಂತಹ ಕಾರ್ಯಕ್ರಮಗಳು ಕಾಲದ ಅವಶ್ಯಕತೆಯಾಗಿದ್ದು ಪ್ರತೀ ಜಮಾಅತ್ ಮಟ್ಟದಲ್ಲಿ ಹಮ್ಮಿಕೊಳ್ಳುವರೇ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಬಂಟ್ವಾಳ ತಾಲೂಕು ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಮಾತನಾಡಿದರು. ಸಂಯುಕ್ತ ಜಮಾಅತ್ ಕೋಶಾಧಿಕಾರಿ ಹಾಜಿ ಪಿ.ಎಸ್.ಅಬ್ದುಲ್ ಹಮೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಸ್ವಾಗತಿಸಿ, ಕಾರ್ಯದರ್ಶಿ ನೋಟರಿ ಕೆ. ಅಬೂಬಕರ್ ವಿಟ್ಲ ವಂದಿಸಿದರು. ಆಶಿಕ್ ಕುಕ್ಕಾಜೆ ಕಿರಾಅತ್ ಪಠಿಸಿದರು, ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ