ಮತದಾರರ ಚೇತನಾ ಮಹಾಭಿಯನದಲ್ಲಿ ಬಂಟ್ವಾಳ ಕ್ಷೇತ್ರ ಮಾದರಿಯಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆ ಬಂಟ್ವಾಳದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್, ಬಂಟ್ವಾಳ ಬಿಜೆಪಿಯೊಂದಿಗೆ ಸದಾ ನಿಕಟ ಸಂಪರ್ಕದಲ್ಲಿರುವ ಶಾಸಕ ರಾಜೇಶ್ ನಾಯ್ಕ್ ಅವರ ಸಹಕಾರದಿಂದ ಪ್ರತಿ ಬೂತಿನಲ್ಲಿ ಮತದಾರರ ಚೇತನಾ ಕಾರ್ಯವನ್ನು ಮೊದಲಿನಿಂದಲೇ ಮಾಡಿಕೊಂಡು ಬಂದಿದೆ. ಮತದಾರರ ಸೇರ್ಪಡೆ ಕಾರ್ಯದಲ್ಲಿ ಬಂಟ್ವಾಳ ಬೇರೆ ಕ್ಷೇತ್ರಗಳಿಗೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಈ ಮತದಾರರ ಚೇತನ ಮಹಾಭಿಯಾನವನ್ನು ಬಂಟ್ವಾಳವು ಅತ್ಯಂತ ಯಶಸ್ವಿಯಾಗಿ ನಡೆಸುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ ಎಂದರು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಂಡಲದ ನಿಕಟಪೂರ್ವ ಅಧ್ಯಕ್ಷ ಹಾಗೂ ಮತದಾರರ ಚೇತನಾ ಮಹಾಭಿಯಾನದ ಜಿಲ್ಲಾ ಸಂಚಾಲಕರಾದ ದೇವದಾಸ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ಕಾರ್ಯ ಯೋಜನೆ ಮತ್ತು ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸಭೆಯನ್ನು ಉದ್ಧೇಶಿಸಿ ಮಾತನಾಡಿ ಪಕ್ಷ ಸಂಘಟನೆಯ ಕುರಿತು ಒತ್ತು ನೀಡಲು ಕರೆ ನೀಡಿದರು. ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ದಿನೇಶ್ ಅಮ್ಟೂರು ಮುಂತಾದವರು ಉಪಸ್ಥಿತರಿದ್ದರು. ಮಂಡಲ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಕ್ಷೇತ್ರ ಪ್ರಮುಖರು ಭಾಗವಹಿಸಿದ ಸಭೆಯಲ್ಲಿ ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ ವಂದೇ ಮಾತರಂ ಗೀತೆ ಹಾಡಿದರು. ಕ್ಷೇತ್ರ ಬಿಜೆಪಿ ಉಪಾಧ್ಯಾಕ್ಷರಾದ ವಜ್ರನಾಥ ಕಲ್ಲಡ್ಕ ಸ್ವಾಗತಿಸಿದರು. ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಮತದಾರರ ಚೇತನಾ ಮಹಾಭಿಯಾನ: ಬಂಟ್ವಾಳ ಬಿಜೆಪಿಯಿಂದ ಮಾಹಿತಿ ಸಭೆ"