ಬಂಟ್ವಾಳ ಬಿಜೆಪಿ ಮಂಡಲದ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತ ವಿರೋಧಿ ಮತ್ತು ಭ್ರಷ್ಟಾಚಾರ ನೀತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ನಡೆಯಿತು.
ಬುಡಾ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ರೈತ ವಿರೋಧಿಯಾದ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೈತರಿಗೆ ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ರಾಜ್ಯದಿಂದ 4 ಸಾವಿರ ರೂಗಳನ್ನು ನೀಡುವ ಮೂಲಕ ರೈತರಿಗೆ ಪ್ರೋತ್ಸಾಹ ನೀಡಿದರೆ ಸಿದ್ದರಾಮಯ್ಯ ನೇತ್ರತ್ವದ ಸರಕಾರ ಅದನ್ನು ನಿಲ್ಲಿಸಿದೆ. ಇದರ ಜೊತೆಗೆ ಬಸವರಾಜ ಬೊಮ್ಮಾಯಿ ಅವರ ಆಡಳಿತ ಅವಧಿಯಲ್ಲಿ ಜಾರಿಮಾಡಲಾಗಿದ್ದ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಿ ರೈತರಿಗೆ ಅನ್ಯಾಯವೆಸಗಿದೆ ಎಂದರು.
ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ ಬಂಟ್ವಾಳ, ಕಸ್ತೂರಿ ಪಂಜ, ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಡೊಂಬಯ್ಯ ಅರಳ,ಹರಿಕೃಷ್ಣ ಬಂಟ್ವಾಳ, ಪ್ರಭಾಕರ್ ಪ್ರಭು, ಚೆನ್ನಪ್ಪ ಆರ್.ಕೋಟ್ಯಾನ್, ದಿನೇಶ್ ಅಮ್ಟೂರು, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ಗಣೇಶ್ ರೈ, ಪುರುಷೋತ್ತಮ ಶೆಟ್ಟಿ, ಕಮಲಾಕ್ಷಿ ಕೆ.ಪೂಜಾರಿ, ಆನಂದ ಕೆ.ಶಂಭೂರು, ಗೋವಿಂದ ಪ್ರಭು, ಸಂತೋಷ್ ರಾಯಿಬೆಟ್ಟು, ವಸಂತ, ಸದಾಶಿವ ಜಿ. ಸುಧಾಕರ ಶೆಟ್ಟಿ, ಚಿದಾನಂದ ರೈ , ಶರ್ಮಿತ್ ಜೈನ್, ಕಾರ್ತಿಕ್ ಬಲ್ಲಾಳ್, ಅಜಿತ್ ಶೆಟ್ಟಿ, ಪ್ರೇಮನಾಥ ಶೆಟ್ಟಿ , ದಿನೇಶ್ ದಂಬೆದಾರ್, ಉಮೇಶ್ ಅರಳ, ವಸಂತ ಅಣ್ಣಳಿಕೆ, ರಾಧಕೃಷ್ಣ ತಂತ್ರಿ, ವಾಮನ ಆಚಾರ್ಯ, ಸುಮಿತ್ರಾ, ಭಾರತಿ ಚೌಟ, ಪಿ.ಎಸ್.ಮೋಹನ್, ತನಿಯಪ್ಪ ಗೌಡ, ಸುರೇಶ್ ಮೈರ, ಲಖಿತ ಆರ್ ಶೆಟ್ಟಿ, ರಾಜೇಶ್ ಬಾಳೆಕಲ್ಲು, ಶಿವಪ್ಪ ಗೌಡ, ಮೋನಪ್ಪ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…