ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬವನ್ನು ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಅದ್ದೂರಿಯಾಗಿ ಅಭಿಮಾನಿಗಳು ಆಚರಿಸಿದರು. ಎಲ್ಲ ಕಡೆಗಳಿಗೂ ರೈಗಳು ತೆರಳಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಅವರೊಂದಿಗೆ ಕಾಲ ಕಳೆದರು. ವಿವಿಧ ಬ್ಲಾಕ್ ಕಾಂಗ್ರೆಸ್ ಗಳು ಈ ಆಚರಣೆಯನ್ನು ನೆರವೇರಿಸಿದವು. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಗಳಲ್ಲಿ ಪ್ರತ್ಯೇಕವಾಗಿ ರಕ್ತದಾನ ಶಿಬಿರ ನಡೆದರೆ, ಬಂಟ್ವಾಳದಲ್ಲಿ ಆಟೊ ಸ್ಟ್ಯಾಂಡ್ ಉದ್ಘಾಟನೆಯೂ ನಡೆಯಿತು. ಈ ಆಚರಣೆಗಳ ಚಿತ್ರ-ವಿವರ ಇಲ್ಲಿದೆ. ಮುಂದೆ ಓದಿರಿ.

ರೈ ಅವರ ಪುತ್ರಿ ಚರಿಷ್ಮಾ ರೈ ಅವರು ಬಿ.ಸಿ.ರೋಡಿನ ರಂಗೋಲಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾದ ರೋಷನ್ ರೈ ಬನ್ನೂರು ಇವರ ನೇತೃತ್ವದಲ್ಲಿ ಮಾಜಿ ಸಚಿವ ರಮಾನಾಥ ರೈ ಅವರ 72ನೇ ಹುಟ್ಟುಹಬ್ಬವನ್ನು ಪುತ್ತೂರು ಸಮೀಪ ಪ್ರಜ್ಞಾ ಆಶ್ರಮದಲ್ಲಿ ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ತಮ್ಮ ಹುಟ್ಟು ಹಬ್ಬ ಹಿನ್ನೆಲೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.
ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಹಾಗೂ ಅಲ್ಪಸಂಖ್ಯಾತರ ಘಟಕ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಬಿ. ರಮಾನಾಥ ರೈ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಬಿ. ಸಿ ರೋಡ್ ರಂಗೋಲಿ ಸಭಾಂಗಣದಲ್ಲಿ ನಡೆಯಿತು.
ಬಂಟ್ವಾಳ ಬೈಪಾಸಿನಲ್ಲಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣ ಉದ್ಘಾಟನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ ಯು .ಬಿ .ವೆಂಕಟೇಶ್ ರವರ 2019 -2020ನೇ ಸಾಲಿನ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಾಣಗೊಂಡಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಬಂಟ್ವಾಳಏರ್ಪಡಿಸಿದ ರಕ್ತದಾನ ಶಿಬಿರದಲ್ಲಿ ರೈ ಅವರನ್ನು ಸನ್ಮಾನಿಸಲಾಯಿತು.
Be the first to comment on "ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ: ಕಾಂಗ್ರೆಸ್ ಪಕ್ಷ ಕಾರ್ಯಕರ್ತರು, ಅಭಿಮಾನಿಗಳಿಂದ ಆಚರಣೆ, ಹಲವೆಡೆ ರಕ್ತದಾನ ಶಿಬಿರ, ಸೇವಾ ಕಾರ್ಯ – PHOTOS"