ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾದ ಡಾ. ಬಿ.ಆರ್ ಅಂಬೇಡ್ಕರ್ ಅವರ ಸುಮಾರು ಎರಡು ವರ್ಷ ಮೂರು ತಿಂಗಳುಗಳ ನಿರಂತರ ಅಧ್ಯಯನದಿಂದ ಮೂಡಿ ಬಂದ ನಮ್ಮ ಭಾರತದ ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಅಮೂಲ್ಯ ಆಸ್ತಿ ಎಂದು ಬಂಟ್ವಾಳ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಎಸ್. ಬಿ .ಕೂಡಲಗಿ ಅಭಿಪ್ರಾಯ ಪಟ್ಟರು.
ತಾಲೂಕು ಆಡಳಿತ ಸೌಧದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಅಶೋಕ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಿಂದಿಯಾ, ಪಶು ವೈದ್ಯಾಧಿಕಾರಿ ಅವಿನಾಶ್ ಭಟ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಾರಾನಾಥ ಸಾಲಿಯಾನ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ದಿನೇಶ್ , ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಶಾಂಭವಿ, ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು , ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ ಮತ್ತಿತರರು ಉಪಸ್ಥಿತರಿದ್ದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುನೀತಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಚುನಾವಣೆ ಶಾಖೆಯ ಉಪತಹಸೀಲ್ದಾರ್ ನವೀನ್ ಬೆಂಜನಪದವು ವಂದಿಸಿದರು.