ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ತಹಸೀಲ್ದಾರ್ ಎಸ್.ಬಿ.ಕೂಡಲಗಿ ಅಧ್ಯಕ್ಷತೆಯಲ್ಲಿ ನಡೆಯಿತು. ಬಂಟ್ವಾಳ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾತನಾಡಿ, ಶುಭ ಹಾರೈಸಿದರು.
ಈ ಸಂದರ್ಭ ವಿಶ್ವಕರ್ಮ ಜಯಂತಿ ಸಂದೇಶವನ್ನು ಸಂದೀಪ್ ಆಚಾರ್ಯ ನೀಡಿದರು. ಪತ್ರಕರ್ತ ಮೌನೇಶ ವಿಶ್ವಕರ್ಮ ಅವರು ಶುಭ ಹಾರೈಸಿದರು. ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರತಿಮಾ ಉಪೇಂದ್ರ ಆಚಾರ್ಯ, ಕೋಶಾಧಿಕಾರಿ ಜಯಚಂದ್ರ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿ ಸುನೀಲ್ ಬಿ.ಆಚಾರ್ಯ, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ದಾರುಶಿಲ್ಪಿ ಉಪೇಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ವಿಶ್ವಕರ್ಮ ಸಮಾಜದ ಗಣ್ಯರು, ತಾಲೂಕು ಆಡಳಿತ ಸೌಧದ ಸಿಬಂದಿ ಉಪಸ್ಥಿತರಿದ್ದ ಕಾರ್ಯಕ್ರಮವನ್ನು ತಾಲೂಕು ಉಪತಹಸೀಲ್ದಾರ್ ನವೀನ್ ಬೆಂಜನಪದವು ನಿರ್ವಹಿಸಿದರು. ರಾ.ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಷುಕುಮಾರ್ ಸಂಯೋಜಿಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…