ಬಂಟ್ವಾಳ

ಬಂಟ್ವಾಳ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ವಿಶ್ವಕರ್ಮ ಪೂಜೆ, ಧಾರ್ಮಿಕ ಸಭೆ

ಬಂಟ್ವಾಳ ಅಜೆಕಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘ ವತಿಯಿಂದ 30ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ನಡೆಯಿತು. ಈ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಯಮ ಕ್ಷೇತ್ರದ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಸಮೂಹದ ಆಡಳಿತ ನಿರ್ದೇಶಕ ಡಾ. ರಾಮಕೃಷ್ಣ ಆಚಾರ್ ಅವರನ್ನು ಸನ್ಮಾನಿಸಿದರು.

ಜಾಹೀರಾತು

ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು. ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಕಟಪಾಡಿ ಮಠದ ಗುರುಸೇವಾ ಪರಿಷತ್ತಿನ ಬಂಟ್ವಾಳ ಕ್ಷೇತ್ರದ ಅಧ್ಯಕ್ಷ ಯುವರಾಜ ಆಚಾರ್ಯ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರತಿಮಾ ಉಪೇಂದ್ರ ಆಚಾರ್ಯ, ಧಾರ್ಮಿಕ ಕಾರ್ಯದರ್ಶಿ ಕಳ್ಳಿಗೆ ನಾರಾಯಣ ಆಚಾರ್ಯ, ಉಪಾಧ್ಯಕ್ಷ ಯಶೋಧರ ಆಚಾರ್ಯ, ಕೋಶಾಧಿಕಾರಿ ಜಯಚಂದ್ರ ಆಚಾರ್ಯ ಸರಪಾಡಿ ಮೊದಲಾದವರು ಉಪಸ್ಥಿತರಿದ್ದರು.ಸಂಘದ ಕಾರ್ಯದರ್ಶಿ ಸಂದೀಪ್ ಬಿ.ಆಚಾರ್ಯ ಪ್ರಸ್ತಾವನೆಗೈದರು. ಸಾಂಸ್ಕೃತಿಕ ಕಾರ್ಯದರ್ಶಿ ಸುನೀಲ್ ಬಿ.ಆಚಾರ್ಯ ಸನ್ಮಾನ ಪತ್ರ ವಾಚಿಸಿದರು. ಮಾಜಿ ಅಧ್ಯಕ್ಷ ಜಯಪ್ರಕಾಶ್ ಆಚಾರ್ಯ ವಂದಿಸಿದರು. ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು. ಭಜನಾ ಸಂಕೀರ್ತನೆ, ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts