ಬಂಟ್ವಾಳ

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ1.5 ಕೋಟಿ ನಿವ್ವಳ ಲಾಭ: ಅಧ್ಯಕ್ಷ ಪ್ರಭಾಕರ ಪ್ರಭು

75 ವರ್ಷಗಳ ಹಿಂದೆ ಬಿ.ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಪ್ರಗತಿಯ ಪಥದಲ್ಲಿದ್ದು, ಎಂಟು ಗ್ರಾಮಗಳಲ್ಲಿ ತೃಪ್ತಿಕರ ಸೇವೆ ನೀಡುತ್ತಿದೆ. 2022-23ನೇ ಸಾಲಿನ ವರ್ಷಾಂತ್ಯಕ್ಕೆ 46.04 ಕೋಟಿ ರೂ ಠೇವಣಿ ಇದ್ದು, ಸಾಲ ಹೊರಬಾಕಿ 81.74 ಕೋಟಿ ರೂ, ದುಡಿಯುವ ಬಂಡವಾಳ 173.35 ಕೋಟಿ ರೂ, ಹೂಡಿಕೆ 14.12 ಕೋಟಿ ರೂ, ಸಂಘದ ಒಟ್ಟು ವ್ಯವಹಾರ 376.85 ಕೋಟಿ ರೂ ಆಗಿದ್ದು, 1.5 ಕೋಟಿ ರೂ ನಿವ್ವಳ ಲಾಭ ಗಳಿಸಿದೆ, ಶೇ.99ರಷ್ಟು ಸಾಲ ವಸೂಲಾತಿ ಮಾಡಲಾಗಿದೆ ಎಂದು ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ.

ಜಾಹೀರಾತು

ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ , ಅವರು ಹವಾಮಾನ ಆಧರಿತ ಬೆಳೆ ವಿಮೆ ಸಾಲ 1166 ರೈತರ 1551 ಎಕರೆ 40 ಲಕ್ಷಕ್ಕೂ ಹೆಚ್ಚು ಪ್ರೀಮಿಯಂ ಪಾವತಿಸಲಾಗಿದೆ. 23ರಂದು ಶನಿವಾರ ಮಹಾಸಭೆ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ ಸಾಧಕ ಮಕ್ಕಳ ಪುರಸ್ಕಾರ ನಡೆಯಲಿದೆ. 486 ಕುಟುಂಬಗಳು ಯಶಸ್ವಿನಿ ಯೋಜನೆಗೆ ನೋಂದಣಿಯಾಗಿದೆ ಎಂದರು. ಶನಿವಾರ ಸೆ.23ರಂದು ಸಂಘದ ಮಹಾಸಭೆ ನಡೆಯಲಿದೆ ಎಂದ ಅವರು, ಹಲವು ಪುರಸ್ಕಾರಗಳನ್ನು ವಿವಿಧ ಸಂದರ್ಭಗಳಲ್ಲಿ ಸಂಘ ಪಡೆದಿದೆ ನಬಾರ್ಡ್ ಸಹಕಾರದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಶೇ 1 ರ ಬಡ್ಡಿ ದರದಲ್ಲಿ 58 ಲಕ್ಷ ವೆಚ್ಚದಲ್ಲಿ ನೇತಾಜಿ ಬಹುಪಯೋಗಿ ಸೇವಾ ಕೇಂದ್ರ ,ಸಂಘದ ಸ್ಥಾಪಕ ಅಧ್ಯಕ್ಷರಾದ ಶ್ರೀ . ಬಿ. ಕೃಷ್ಣ ರೈ ಸವಿನೆನಪಿಗಾಗಿ  ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ, ನಿರ್ಮಿಸಲಾಗಿದೆ. ಸಂಘದ ಆರ್ಥಿಕತೆ ಬಲವರ್ಧನೆ ದೃಷ್ಟಿಯಿಂದ  ಸಂಘದ ಅಮೃತ ಮಹೋತ್ಸವ ಹಾಗೂ ಸ್ವಾತಂತ್ರ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ ಹೋರಾಟಗಾರ ವೀರ ಸಾರ್ವಕರ್ ವಾಣಿಜ್ಯ ಸಂಕಿರ್ಣ ನಿರ್ಮಾಣ ಮಾಡಲಾಗಿದೆಎಂದರು.

ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಸಂದೇಶ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಪದ್ಮರಾಜ ಬಲ್ಲಾಳ ಮಾವಂತೂರು, ದಿನೇಶ್ ಪೂಜಾರಿ ಹುಲಿಮೇರು, ವೀರಪ್ಪ ಪರವ , ಜಾರಪ್ಪ ನಾಯ್ಕ , ಉಮೇಶ್ ಗೌಡ, ದೇವರಾಜ್ ಸಾಲ್ಯಾನ್ , ಹರೀಶ್ ಆಚಾರ್ಯ, ಅರುಣಾ ಎಸ್ ಶೆಟ್ಟಿ, ಮಂದಾರತಿ ಎಸ್ ಶೆಟ್ಟಿ, ವೃತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಕೇಶವ ಕಿಣಿ  , ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಆಡಳಿತ ಮಂಡಳಿಯಲ್ಲಿದ್ದಾರೆ.

.ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ವೀರಪ್ಪ ಪರವ , ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಹರೀಶ್ ಆಚಾರ್ಯ, , ಮಂದಾರತಿ ಎಸ್ ಶೆಟ್ಟಿ, ವೃತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಮುಖ್ಯಕಾರ್ಯನಿರ್ವಾಹಣಾಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts