ಕಳವು ಪ್ರಕರಣಗಳಿಗೆ ಬೇಕಾದ ಆರೋಪಿ ಅರೆಸ್ಟ್: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ

ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಭತ್ತು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಬಂಧಿತ ಆರೋಪಿ. ‌ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಜಾಹೀರಾತು

ಇದರ ಜೊತೆಗೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳಿದ್ದು, ಅ ಪ್ರಕರಣದಲ್ಲಿಯೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಬಂಟ್ವಾಳ ನಗರ ಪೋಲೀಸ್ ಠಾಣೆ, ವಿಟ್ಲ ಪೋಲಿಸ್ ಠಾಣೆ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೋಣಾಜೆ ಪೋಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಪ್ರಕರಣ ದಾಖಲಾಗಿದ್ದು,ಈತ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್, ಹಾಗೂ ಉಪನಿರೀಕ್ಷಕರಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಣೇಶ್ ಪ್ರಸಾದ್, ಪುನೀತ್ ಕುಮಾರ್ , ವಿಜಯಕುಮಾರ್ ,ರಂಜಾನ್ ಅವರು ಪುತ್ತೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಳವು ಪ್ರಕರಣಗಳಿಗೆ ಬೇಕಾದ ಆರೋಪಿ ಅರೆಸ್ಟ್: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*