ಕಲ್ಲಡ್ಕದ ಶ್ರೀ ಶಾರದ ಸೇವಾ ಪ್ರತಿಷ್ಠಾನ (ರಿ) ಆಶ್ರಯದಲ್ಲಿ ನಡೆಯುವ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪ್ರತಿಷ್ಠಾನದ ಕಚೇರಿಯಲ್ಲಿ ನಡೆಯಿತು.
ಸುದೆಕಾರು ಮುತ್ತಣ್ಣ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಜಗತ್ತು ಅದುನಿಕತೆಗೆ ತೆರೆದುಕೊಂಡಿದ್ದರೂ ಸಮಿತಿಯ ಸದಸ್ಯರು ಈ ಗ್ರಾಮ ಮತ್ತು ಆಸುಪಾಸಿನ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಆಮಂತ್ರಣ ತಲುಪಿಸುತ್ತಿರುವುದು ಶ್ಲಾಘನೀಯ ಎಂದು ಶುಭ ಹಾರೈಸಿದರು.
ಪ್ರತಿಷ್ಠಾನದ ಅಧ್ಯಕ್ಷ ಯತೀನ್ ಕುಮಾರ್ ಮಾತನಾಡಿ ಅಕ್ಟೋಬರ್ 20ರ ಶುಕ್ರವಾರ ಕಲ್ಲಡ್ಕದ ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ವೇದಮೂರ್ತಿ ಶ್ರೀಪತಿ ಭಟ್ ಅವರ ನೇತೃತ್ವದಲ್ಲಿ ಶಾರದ ಮಾತೆಯ ಪ್ರತಿಷ್ಠೆ ನಡೆಯಲಿದ್ದು ನಿರಂತರ ನಾಲ್ಕು ದಿವಸ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅನ್ನಸಂತರ್ಪಣೆಯೂ ನಡೆಯಲಿರುವುದಲ್ಲದೆ ದಿನಾಂಕ 22ರ ಭಾನುವಾರ ಭುವನೇಶ್ ಪಚ್ಚಿನಡ್ಕ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು 23ರ ಸೋಮವಾರ ಸಂಜೆ 6.00 ಗಂಟೆಗೆ ಕಲ್ಲಡ್ಕದ ರಾಜರಸ್ತೆಯಲ್ಲಿ ಶಾರದ ಮಾತೆಯ ವೈಭವದ ಶೋಭಾಯಾತ್ರೆ ಜರುಗಲಿದೆ ಎಂದು ಕಾರ್ಯಕ್ರಮದ ಮಾಹಿತಿಯನ್ನು ನೀಡಿದರು.
ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ಸ್ವಾಗತಿಸಿದರು. ಪ್ರತಿಷ್ಠಾನದ ಸದಸ್ಯರಾದ ರಾಜೇಶ್ ಕೊಟ್ಟಾರಿ ವಂದಿಸಿದರು. ಉತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕಲ್ಲಡ್ಕ ಉಪಸ್ಥಿತರಿದ್ದರು.
Be the first to comment on "ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ 46ನೇ ವರ್ಷದ ಶಾರದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ"